Featured

ಕರ್ನಾಟಕ ಉಪಚುನಾವಣೆ : ಗೆಲುವು ನಮ್ಮದೇ ಎಂದ ಎನ್‌ಡಿಎ ನಾಯಕರು ; ಸಮೀಕ್ಷೆಗಳು ಹಿಂದೆ ಸುಳ್ಳಾಗಿವೆ ಎಂದ ಕಾಂಗ್ರೆಸ್‌ – vishwanews24

ಕರ್ನಾಟಕ ಉಪಚುನಾವಣೆ : ಗೆಲುವು ನಮ್ಮದೇ ಎಂದ ಎನ್‌ಡಿಎ ನಾಯಕರು ; ಸಮೀಕ್ಷೆಗಳು ಹಿಂದೆ ಸುಳ್ಳಾಗಿವೆ ಎಂದ ಕಾಂಗ್ರೆಸ್‌

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ಗೆ  ಬಿಗ್‌ ಶಾಕ್‌ ಸಿಗುವ ಸಾಧ್ಯತೆಯಿದೆ.

ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್‌ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆಯನ್ನು ಇಟ್ಟುಕೊಂಡಿದೆ. ಆದರೆ ಸಮೀಕ್ಷೆಯಲ್ಲಿ ಸಂಡೂರು ಮಾತ್ರ ಈ ಬಾರಿ ಕೈ ಹಿಡಿಯಲಿದೆ ಎಂದು ಭವಿಷ್ಯ ನುಡಿದಿವೆ.

ಪಿ-ಮಾರ್ಕ್ ಸಮೀಕ್ಷೆ ಚನ್ನಪಟ್ಟಣದಲ್ಲಿ ಜೆಡಿಎಸ್‌, ಶಿಗ್ಗಾವಿಯಲ್ಲಿ ಬಿಜೆಪಿ, ಸಂಡೂರಿನಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಹೇಳಿದೆ. ಉಪಚುನಾವಣೆಯ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ನೋಡಿ ಎನ್‌ಡಿಎ ಮೈತ್ರಿಕೂಟದಲ್ಲಿ ಸಂಭ್ರಮ ಮನೆ ಮಾಡಿದೆ. ಆದರೆ ಕಾಂಗ್ರೆಸ್‌ ಸಮೀಕ್ಷಾ ವರದಿಯನ್ನು ಒಪ್ಪಿಕೊಂಡಿಲ್ಲ. ಹಿಂದೆ ಹಲವಾರು ಸಮೀಕ್ಷೆಗಳು ಸುಳ್ಳಾಗಿವೆ. ಹೀಗಾಗಿ ಈ ಬಾರಿ ಮೂರಕ್ಕೆ ಮೂರು ಸ್ಥಾನ ಗೆಲ್ಲುತ್ತೇವೆ ಎಂದು ಕಾಂಗ್ರೆಸ್‌ ಹೇಳುತ್ತಿದೆ.

ಎನ್‌ಡಿಎ ಪಾಳೆಯದಲ್ಲಿ ವಿಶ್ವಾಸ:
ಶಿಗ್ಗಾಂವಿ ಗೆಲುವು ನಿಶ್ಚಿತ ಎನ್ನುವ ವಿಶ್ವಾಸದಲ್ಲಿ ಮೈತ್ರಿ ನಾಯಕರಿದ್ದಾರೆ. ಸಂಸದ ಬೊಮ್ಮಾಯಿ ಸ್ವಕ್ಷೇತ್ರದ ಮೇಲೆ ಹಿಡಿತ ಇಟ್ಟುಕೊಂಡಿದ್ದಾರೆ. ಕಾಂಗ್ರೆಸ್‌ನಲ್ಲಿ ನಾಯಕತ್ವದ ಕೊರತೆ ಬಿಜೆಪಿಗೆ ಪ್ಲಸ್ ಆಗಲಿದೆ ಎನ್ನುವ ಲೆಕ್ಕಾಚಾರವನ್ನು ಹಾಕಿಕೊಂಡಿದ್ದಾರೆ.

ಸಂಡೂರಿನಲ್ಲೂ ಈ ಬಾರಿ ಅಲ್ಲಿ ಜನ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಆಂತರಿಕ ಕಚ್ಚಾಟ ನಮಗೆ ಪೂರಕ ಆಗಲಿದೆ. ಜನಾರ್ದನ ರೆಡ್ಡಿ ಕಮಾಲ್ ಮಾಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಚನ್ನಪಟ್ಟಣದಲ್ಲಿ ನಿಖಿಲ್ ಜಯಗಳಿಸಲಿದ್ದಾರೆ.

ಜಮೀರ್ ಹೇಳಿಕೆಗಳು, ದೇವೇಗೌಡರ ಪ್ರವೇಶ, ನಿಖಿಲ್ ಮೇಲೆ ಅನುಕಂಪ ಎಲ್ಲ ಕೆಲಸ ಮಾಡಲಿದೆ. ಯೋಗೇಶ್ವರ್‌ ಕೊನೆ ಕ್ಷಣದಲ್ಲಿ ಸೇರಿದ್ದರಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ. ನಮ್ಮ ಒಗ್ಗಟ್ಟಿನ ಶ್ರಮ ಕೈ ಹಿಡಿಯಲಿದೆ ಎಂದು ದೋಸ್ತಿ ನಾಯಕರು ಹೇಳುತ್ತಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago