Featured

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಶೂನ್ಯ ಫಲಿತಾಂಶವಿಲ್ಲದೆ ದಾಖಲೆ ಬರೆದ ಸರ್ಕಾರಿ ಶಾಲೆಗಳು -Vishwanews24

ಬೆಂಗಳೂರು,: ಕರ್ನಾಟಕ ಪ್ರೌಢ ಶಿಕ್ಷಣ ಇಲಾಖೆಯು 2019ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ.

ಯಾವುದೇ ಸರ್ಕಾರಿ ಶಾಲೆಗಳು ಶೂನ್ಯ ಫಲಿತಾಂಶವನ್ನು ಪಡೆಯದೆ ಜನರು ಹುಬ್ಬೇರಿಸುವಂತೆ ವಿದ್ಯಾರ್ಥಿಗಳು ಮಾಡಿದ್ದಾರೆ. ಇದು ಕರ್ನಾಟಕದ ಪಾಲಿಗೆ ಹೆಮ್ಮೆಯ ವಿಷಯವಾಗಿದೆ.

ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಆನೇಕಲ್‌ನಸೆಂಟ್‌ ಫಿಲೋಮಿನಾ ಶಾಲೆಯ ಸೃಜನಾ ಡಿ. ಮತ್ತು ಕುಮಟಾದ ನಾಗಾಂಜಲಿ ನಾಯಕ್‌ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಪಡೆದಿದ್ದಾರೆ.

ಯಾವ ಸರ್ಕಾರಿ ಶಾಲೆಯೂ ಕೂಡ ಶೂನ್ಯ ಫಲಿತಾಂಶ ಪಡೆಯದೆ ದಾಖಲೆ ನಿರ್ಮಿಸಿವೆ. ಕಳೆದ ಬಾರಿ 6 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿತ್ತು. ಒಟ್ಟು 593 ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಪಡೆದುಕೊಂಡಿವೆ. ಅನುದಾನಿತ ಶಾಲೆಗಳ ಪೈಕಿ 130 ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಹಾಗೂ 9 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಇನ್ನು 903 ಅನುದಾನರಹಿತ ಶಾಲೆಗಳಲ್ಲಿ ಶೇ.100ರಷ್ಟು ಫಲಿತಾಂಶ ಹಾಗೂ 37 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ..

2019ನೇ ಸಾಲಿನಲ್ಲಿ ಶೇ 73.70ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರು ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಫಲಿತಾಂಶವನ್ನು ಪಡೆದಿದ್ದಾರೆ.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

15 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

15 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

16 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

16 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

16 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

16 hours ago