Featured

ಕರ್ನಾಟಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು ಬಜೆಟ್‌ ನಿರೂಪಿಸಿದೆ: ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಕರ್ನಾಟಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು ಬಜೆಟ್‌ ನಿರೂಪಿಸಿದೆ: ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಕರ್ನಾಟಕವು ಹಲವು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಮೂಲಕ ದೇಶದ ಪ್ರಗತಿಪರ ರಾಜ್ಯಗಳಲ್ಲೊಂದು ಎಂಬುದನ್ನು 2025-26 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ ನಿರೂಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಚಿವರು, 2025-26ನೇ ಸಾಲಿನ ಈ ಆಯ-ವ್ಯಯವು ಕರ್ನಾಟಕದ ಭವ್ಯ ಭವಿಷ್ಯದ ದಿಕ್ಸೂಚಿಯಾಗಿ ಹೊರಹೊಮ್ಮಿದೆ. ಜನ ಕೇಂದ್ರೀತ ಅಭಿವೃದ್ಧಿಯ ಮಾದರಿಯನ್ನು ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಸಾಮಾಜಿಕ ಬಲವರ್ಧನೆಯ ಮೂಲಕ ಆರ್ಥಿಕ ಸುಸ್ಥಿರತೆ ಸಾಧಿಸುವಲ್ಲಿ ಮುನ್ನುಗ್ಗುತ್ತಿದೆ ಎಂದಿದ್ದಾರೆ.

ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಪರತೆಯನ್ನು ಪ್ರತಿಪಾದಿಸುವ ಕರ್ನಾಟಕ ಮಾದರಿಗೆ ದೇಶದಲ್ಲಷ್ಟೇ ಅಲ್ಲ, ಜಾಗತಿಕವಾಗಿಯೂ ಮನ್ನಣೆ ದೊರಕಿದೆ. ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿರುವ ಈ ಬಜೆಟ್ ಕರ್ನಾಟಕದ ಪ್ರಗತಿಯ ಔನತ್ಯಕ್ಕೆ ಕಾರಣವಾಗಲಿದೆ. ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡುವ ಕಾರ್ಯ ಯೋಜನೆಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. 2025-26ರ ಈ ಪ್ರಗತಿಪರ ಬಜೆಟ್‌ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಕರ್ನಾಟಕ ಮಾದರಿಯನ್ನು ಮತ್ತಷ್ಟು ಪ್ರಕಾಶಿಸುವಂತೆ ಮಾಡಲು ನಮ್ಮ ಸರ್ಕಾರ ಬದ್ಧತೆ ಹೊಂದಿದೆ ಎಂದು ಸಚಿವ ಖರ್ಗೆ ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

13 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

13 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

14 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

14 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

17 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

17 hours ago