ಬೆಂಗಳೂರು: ರಾಜ್ಯ ಸರಕಾರದ ಮರಾಠ ನಿಗಮ ರಚನೆ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದೆ ಇಂದು ವಿವಿಧ ಕನ್ನಡ ಸಂಘಟನೆಗಳು ರಾಜ್ಯದಾದ್ಯಂತ ಬಂದ್‌ಗೆ ಕರೆ ನೀಡಿದೆ. ಆದರೆ ಕರ್ನಾಟಕ ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆಯಾಗಲಿದ್ದಾರೆ ಎಂದು ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.
ಬಂದ್ ಆಚರಿಸುವವರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್ ನಿಯಮ ಉಲ್ಲಂಘಿಸಿದರೂ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಲೆಟ್ಸ್ ಕಿಡ್ ಫೌಂಡೇಷನ್ ಹಾಗೂ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಮತ್ತಿತರರು ಸಲ್ಲಿಸಿರುವ ಅರ್ಜಿಗಳನ್ನು ಮುಖ್ಯ ನ್ಯಾಯ-ಮೂರ್ತಿ ಎ.ಎಸ್. ಓಕ್ ನೇತೃತ್ವದ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ಶನಿವಾರ ನಡೆಯಲಿರುವ ಪ್ರತಿಭಟನೆ ವಿಷಯವನ್ನು ಅರ್ಜಿದಾರರ ಪರ ವಕೀಲರು ಪ್ರಸ್ತಾಪಿಸಿದಾಗ ಪೀಠ, ”ಈ ಬಂದ್‌ನಿಂದಾಗುವ ನಷ್ಟಕ್ಕೆ ಆಯೋಜಕರೇ ಹೊಣೆಯಾಗಿರುತ್ತಾರೆ.
ವ್ಯಾಪಾರಿಗಳಿಗೆ ಆಗುವ ನಷ್ಟಕ್ಕೂ ಆಯೋಜಕರೇ ಹೊಣೆ ಹೊರಬೇಕಾಗುತ್ತದೆ,”ಎಂದು ಹೇಳಿತು. ”ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆಗೆ ತಿದ್ದುಪಡಿ ತಂದಿದೆ. ಆ ಪ್ರಕಾರ ಕಠಿಣ ಕ್ರಮಗಳನ್ನು ಜರುಗಿಸಬೇಕು. ಆದರೆ, ಸರಕಾರ ಕಾಯಿದೆಯ ನಿಯಮಗಳನ್ನು ಅಮಾನತಿನಲ್ಲಿಟ್ಟು, ಅದಕ್ಕೆ ತಿದ್ದುಪಡಿ ತರುತ್ತೇವೆ ಎನ್ನುತ್ತಿದೆ. ಕಡೇ ಪಕ್ಷ ಕಾಯಿದೆಗೆ ತಿದ್ದುಪಡಿ ಮಾಡುವುದಕ್ಕೂ ಮುಂದಾಗಿಲ್ಲ. ಸರಕಾರದ ಈ ನಡೆ ಸರಿಯಾದುದಲ್ಲ,” ಎಂದು ಆಕ್ಷೇಪಿಸಿತು.
”
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…