Featured

ಕರ್ನಾಟಕ ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ : ಹೈಕೋರ್ಟ್‌ -Vishwanews24

ಕರ್ನಾಟಕ ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ : ಹೈಕೋರ್ಟ್‌ -Vishwanews24

ಬೆಂಗಳೂರು: ರಾಜ್ಯ ಸರಕಾರದ ಮರಾಠ ನಿಗಮ ರಚನೆ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದೆ ಇಂದು ವಿವಿಧ ಕನ್ನಡ ಸಂಘಟನೆಗಳು ರಾಜ್ಯದಾದ್ಯಂತ ಬಂದ್‌ಗೆ ಕರೆ ನೀಡಿದೆ. ಆದರೆ ಕರ್ನಾಟಕ ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆಯಾಗಲಿದ್ದಾರೆ ಎಂದು ಹೈಕೋರ್ಟ್‌ ಖಡಕ್‌ ಎಚ್ಚರಿಕೆ ನೀಡಿದೆ.

ಬಂದ್‌ ಆಚರಿಸುವವರು ಮಾಸ್ಕ್‌ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್‌ ನಿಯಮ ಉಲ್ಲಂಘಿಸಿದರೂ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಲೆಟ್ಸ್‌ ಕಿಡ್‌ ಫೌಂಡೇಷನ್‌ ಹಾಗೂ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಮತ್ತಿತರರು ಸಲ್ಲಿಸಿರುವ ಅರ್ಜಿಗಳನ್ನು ಮುಖ್ಯ ನ್ಯಾಯ-ಮೂರ್ತಿ ಎ.ಎಸ್‌. ಓಕ್‌ ನೇತೃತ್ವದ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ಶನಿವಾರ ನಡೆಯಲಿರುವ ಪ್ರತಿಭಟನೆ ವಿಷಯವನ್ನು ಅರ್ಜಿದಾರರ ಪರ ವಕೀಲರು ಪ್ರಸ್ತಾಪಿಸಿದಾಗ ಪೀಠ, ”ಈ ಬಂದ್‌ನಿಂದಾಗುವ ನಷ್ಟಕ್ಕೆ ಆಯೋಜಕರೇ ಹೊಣೆಯಾಗಿರುತ್ತಾರೆ.

ವ್ಯಾಪಾರಿಗಳಿಗೆ ಆಗುವ ನಷ್ಟಕ್ಕೂ ಆಯೋಜಕರೇ ಹೊಣೆ ಹೊರಬೇಕಾಗುತ್ತದೆ,”ಎಂದು ಹೇಳಿತು. ”ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆಗೆ ತಿದ್ದುಪಡಿ ತಂದಿದೆ. ಆ ಪ್ರಕಾರ ಕಠಿಣ ಕ್ರಮಗಳನ್ನು ಜರುಗಿಸಬೇಕು. ಆದರೆ, ಸರಕಾರ ಕಾಯಿದೆಯ ನಿಯಮಗಳನ್ನು ಅಮಾನತಿನಲ್ಲಿಟ್ಟು, ಅದಕ್ಕೆ ತಿದ್ದುಪಡಿ ತರುತ್ತೇವೆ ಎನ್ನುತ್ತಿದೆ. ಕಡೇ ಪಕ್ಷ ಕಾಯಿದೆಗೆ ತಿದ್ದುಪಡಿ ಮಾಡುವುದಕ್ಕೂ ಮುಂದಾಗಿಲ್ಲ. ಸರಕಾರದ ಈ ನಡೆ ಸರಿಯಾದುದಲ್ಲ,” ಎಂದು ಆಕ್ಷೇಪಿಸಿತು.

 

”

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago