ಕರ್ನಾಟಕ ಬಂದ್​ : ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ – Vishwanews24

Featured, ಉಡುಪಿ

ಕರ್ನಾಟಕ ಬಂದ್​ : ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ 

ಉಡುಪಿ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಕಂಡಿಸಿ ಇಂದು ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್​ಗೆ ಕರೆ ನೀಡಿದೆ. ಆದರೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಇಂದು ಕರ್ನಾಟಕ ಬಂದ್​ಗೆ ಕರೆ ನೀಡಿದ್ದರೂ ಕೂಡ ಉಡುಪಿಯಲ್ಲಿ ವಾಹನ ಸಂಚಾರ, ಅಂಗಡಿ ಮುಂಗಟ್ಟು, ವ್ಯಾಪಾರ ವಹಿವಾಟು ಎಂದಿನಂತೆ ಯಥಾ ಸ್ಥಿತಿಯಲ್ಲಿದೆ.

ಇನ್ನು ಖಾಸಗಿ ಬಸ್‌ಗಳು ಮತ್ತು ಕೆಎಸ್ಆರ್‌ಟಿಸಿ ಬಸ್‌ಗಳು ಯಥಾ ಸ್ಥಿತಿಯಲ್ಲಿ ಸಂಚಾರ ನಡೆಸುತ್ತಿದ್ದು, ಉಡುಪಿ ನಗರ ಭಾಗದಲ್ಲಿ ಎಂದಿನಂತೆ ಜನಸಂಚಾರ ಇದೆ.

ಅಖಂಡ ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ – Vishwanews24

Leave a Reply