Featured

ಕರ್ನಾಟಕ ಬಂದ್ : ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ – Vishwanews24

ಕರ್ನಾಟಕ ಬಂದ್ : ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ಮಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ  ಬಿಡುತ್ತಿರುವ ವಿಚಾರವಾಗಿ ಕನ್ನಡ ಪರ ಸಂಘಟನೆಗಳು ಸೇರಿದಂತೆ ರಾಜ್ಯಾದ್ಯಂದ ಶುಕ್ರವಾರ ಬಂದ್  ನಡೆಸುತ್ತಿವೆ. ಆದರೆ ಕರಾವಳಿ ಭಾಗ ಉಡುಪಿ ಮತ್ತು ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಂದ್ ನಿಂದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಕರಾವಳಿಯಲ್ಲಿ ಬಂದ್ ಗೆ ನೇರವಾಗಿ ಇಂಗಿತ ವ್ಯಕ್ತವಾಗಿಲ್ಲ. ನೈತಿಕ ಬೆಂಬಲವಷ್ಟೇ ನೀಡಿದ್ದು, ಹೀಗಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸುತ್ತಿದೆ.

ಮಂಗಳೂರಿನಲ್ಲಿ ಎಲ್ಲಾ ಹೋಟೆಲ್, ಪೆಟ್ರೋಲ್ ಬಂಕ್‌ಗಳು ತೆರೆದಿದ್ದು, ಎಲ್ಲಾ ಉದ್ಯಮಗಳೂ ಎಂದಿನಂತೆ ನಡೆಯುತ್ತಿವೆ. ಕರ್ನಾಟಕ ಬಂದ್ ಇದ್ದರೂ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ. ಸರ್ಕಾರಿ ಕಚೇರಿಗಳು ಕೂಡಾ ಎಂದಿನಂತೆ ನಿರ್ವಹಿಸುತ್ತಿವೆ. ಜನರ ನಿತ್ಯದ ವಹಿವಾಟುಗಳು ಮುಂಜಾನೆಯಿಂದಲೇ ಆರಂಭವಾಗಿವೆ.

ಕರಾವಳಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್‌ಗೆ ನೈತಿಕ ಸೂಚಿಸಿದ ಹಿನ್ನಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತೆ ಇರಲಿದೆ.

ಕಾವೇರಿ ವಿಚಾರವಾಗಿ ನಮಗೆ ಸಹಾನುಭೂತಿಯಿದ್ದು ಆದರೆ ಬಂದ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗಲಿದೆ ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago