ಮಂಗಳೂರು: ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ ದೊರೆತಿದ್ದು, ಎಂದಿನಂತೆ ಖಾಸಗಿ ಬಸ್‌ಗಳು ಮತ್ತು ಕೆ ಎಸ್ ಆರ್ ಟಿ ಸಿ ಬಸ್‌ಗಳು, ಆಟೋಗಳು ರಸ್ತೆಗಿಳಿದಿದ್ದು, ಬಂದರು ಪ್ರದೇಶದಲ್ಲಿ ವ್ಯಾಪಾರ ವಹಿವಾಟುಗಳು ಆರಂಭವಾಗಿದೆ.
ಇನ್ನು ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಗರದಾದ್ಯಂತ 300 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
6 ಕೆಎಸ್‌ಆರ್‌ಪಿ, 8 ಡಿಎಆರ್ ತುಕಡಿಗಳು ಮತ್ತು 50 ಹೋಂ ಗಾರ್ಡ್ ಗಳನ್ನು ನಿಯೋಜನೆ ಮಾಡಿದ್ದು, ಇಂದು ಬೆಳಗ್ಗಿನಿಂದಲೇ ಪೊಲೀಸ್ ಅಧಿಕಾರಿಗಳು ರೌಂಡ್ಸ್ ನಲ್ಲಿದ್ದಾರೆ.
ಇನ್ನು ಬಲವಂತವಾಗಿ ಬಂದ್ ನಡೆಸಲು ಮುಂದಾದವರಿಗೆ ಮತ್ತು ಕೋವಿಡ್ 19 ನಿಯಮಾವಳಿ ಉಲ್ಲಂಘಿಸಿದವರಿಗೆ ಕಾನೂನು ಕ್ರಮದ ಕೈಗೊಳ್ಳಲಾಗುವುದು ಎಂದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಕೇವಲ ಪ್ರತಿಭಟನೆಗೆ ಮಾತ್ರ ಸೀಮಿತವಾಗಿರುವ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ನಗರದ ಮಿನಿ ವಿಧಾನಸೌಧದ ಎದುರು ರೈತಪರ ಸಂಘಟನೆಗಳು, ಡಿವೈಎಫ್ ಐ ,ಸಿಪಿಐ, ಸಿಪಿಐಎಂ, ಕಾಂಗ್ರೆಸ್ ,ಜೆಡಿಎಸ್ , ಸಿಐಟಿಯು,ಎಐಟಿಯುಸಿ, ಡಿ ಎಸ್ ಎಸ್ ಸಂಘಟನೆಯಿಂದ ಪ್ರತಿಭಟನೆ ನಡೆಯಲಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…