ಕಾಪು: ರಾಜ್ಯ ಬಿಜೆಪಿ ರೈತರ ಸಾಲ ಮನ್ನ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಕೊಟ್ಟಿರುವ ಹಿನ್ನಲೆಯಲ್ಲಿ ಬಂದ್ ಬೆಂಬಲಿಸಿ ಕಾಪುವಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಕಾಪು ಶಾಸಕ ಲಾಲಾಜಿ ಮೆಂಡನ್ ಮಾತನಾಡಿ” ಚುನಾವಣಾ ಪೂರ್ವಭಾವಿಯಾಗಿ ನೀಡಿದ ಪ್ರಣಾಲಿಕೆ ಪ್ರಕಾರ ಕುಮಾರಸ್ವಾಮಿ ನಡೆಯುತ್ತಿಲ್ಲ,24ಗಂಟೆಯಲ್ಲಿ ಸಾಲಮನ್ನ ಮಾಡುತ್ತೆನೆಂದು ಹೇಳಿದ ಇವರು ಈಗ ಮಾತಿನ ವರಸೆ ಬದಲಿಸಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಮತ್ತು ಕುಮಾರಸ್ವಾಮಿ ಕಾಂಗ್ರೇಸ್ ನ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ತದನಂತರ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಮಾತನಾಡುತ್ತ” ರಾಜ್ಯದಲ್ಲಿ ಜನರನ್ನ ಕೊಳ್ಳೆ ಹೊಡೆಯುವ ಪಕ್ಷಗಳು ಸರ್ಕಾರ ನಡೆಸುತ್ತಿದೆ , ಬಡವರ ರೈತರ ಬಗ್ಗೆ ಚೂರು ಕರುಣೆಯಿಲ್ಲದಂತೆ ವರ್ತಿಸುತ್ತಿದ್ದು ಇದು ಕಾಂಗ್ರೇಸ್ ಮತ್ತು ಜೆಡಿಎಸ್ ನ ಅನೈತಿಕ ಸಂಬಂಧದ ಪರಮಾವಧಿ , ರಾಜ್ಯದ ಜನರ ಮುಲಾಜಿನಲಿಲ್ಲ ಕಾಂಗ್ರೆಸ್ ನ ಮುಲಾಜಿನಲ್ಲಿದ್ದೆನೆಂದು ರಾಜ್ಯದ ಮುಖ್ಯಮಂತ್ರಿಗೆ ಹೇಳಲು ನಾಚಿಕೆಯಾಗ್ಬೇಕು ಎಂದರು.
ಬಿಜೆಪಿ ಜಿಲ್ಲಾ ವಕ್ತಾರ ಕಟಪಾಡಿ ಶಂಕರ ಪೂಜಾರಿ,ಮಿಥುನ್ ಹೆಗ್ಡೆ,ಗಂಗಾಧರ್ ಸುವರ್ಣ, ಯುವಮೋರ್ಚ ಅಧ್ಯಕ್ಷ ಪ್ರವೀಣ್ ಪೂಜಾರಿ,ಶಿಲ್ಪಾ ಜಿ ಸುವರ್ಣ, ಕೇಸರಿ ಉಚ್ಚಿಲ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…