Featured

ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಸೇರಿ ಹಲವಾರು ಹೋರಾಟಗಾರು ಪೋಲೀಸರ ವಶಕ್ಕೆ -Vishwanews24

ಕರ್ನಾಟಕ ಬಂದ್ : ವಾಟಾಳ್ ನಾಗರಾಜ್ ಸೇರಿ ಹಲವಾರು ಹೋರಾಟಗಾರು ಪೋಲೀಸರ ವಶಕ್ಕೆ -Vishwanews24

ಬೆಂಗಳೂರು : ರಾಜ್ಯಾದ್ಯಂತ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕರ್ನಾಟಕ ಬಂದಿಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ.ರಾ. ಗೋವಿಂದ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಸೇರಿದಂತೆ ಹಲವಾರು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಟೌನ್ ಹಾಲ್ ಬಳಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹಾಗೂ ಸಾ.ರಾ. ಗೋವಿಂದ್ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದರು.

ಅದೇ ರೀತಿ ನಗರದ ಕೆಲವು ಕಡೆಗಳಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆಯ ಕಿಚ್ಚು ಭುಗಿಲೆದ್ದಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ನಾರಾಯಣಗೌಡ ನೇತೃತ್ವದಲ್ಲಿ ಗಾಂಧಿನಗರ, ಮೌರ್ಯ ವೃತ್ತ, ರೇಸ್ ಕೋರ್ಸ್ ರಸ್ತೆ, ಶಿವಾನಂದ ಸರ್ಕಲ್ ಗಳ ಮೂಲಕ ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.ಈ ವೇಳೆ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸರಕಾರ ಕೂಡಲೇ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಕೂಡಲೇ ಕೈ ಬಿಡಬೇಕು ಎಂದು ಆಗ್ರಹಿಸಿದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago