Featured

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ – vishwanews24

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಇಂದು ಬೆಂಗಳೂರಿನಲ್ಲಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್​ ಕಟೀಲ್ ಅವರು ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷರ ಕೊಠಡಿಯಲ್ಲಿ ಹಿರಿಯರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಆದ್ರೆ, ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಬಂಡಾಯದ ಬಿಸಿ ತಟ್ಟಿದೆ. ಹೌದು.. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿರುವ ಬಹುತೇಕ ನಾಯಕರ ಗೈರು ಎದ್ದು ಕಾಣುತ್ತಿತ್ತು.

ಸಿ.ಟಿ.ರವಿ, ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಡಾ.ಕೆ.ಸುಧಾಕರ್​, ಅರವಿಂದ ಬೆಲ್ಲದ್, ಅರವಿಂದ ಲಿಂಬಾವಳಿ ಸೇರಿದಂತೆ ಸಂತೋಷ್ ಬಣದ ನಾಯಕಕರು ವಿಜಯೇಂದ್ರ ಕಾರ್ಯಕ್ರಮದಿಂದ ದೂರು ಉಳಿದಿದ್ದಾರೆ. ಇದರೊಂದಿಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಆರಂಭದಲ್ಲೇ ಬಂಡಾಯದ ಬಿಸಿ ತಟ್ಟಿದೆ.

ಇನ್ನು ಪದಗ್ರಹಣ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್​.ಯಡಿಯೂರಪ್ಪ, ಡಿವಿ ಸದಾನಂದಗೌಡ, ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಮುನಿರತ್ನ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ನಾಯಕರು ಹಾಜರಿದ್ದರು.

ಅಧಿಕಾರ ಸ್ವೀಕಾರಕ್ಕೂ ಮೊದಲು ವಿಜಯೇಂದ್ರ ಇಂದು ಬಿಜೆಪಿ ಕಚೇರಿಯಲ್ಲಿ ಗಣಪತಿ ಹೋಮ ಮತ್ತು ಗೌರಿ ಹೋಮದ ಪೂರ್ಣಾಹುತಿಯಲ್ಲಿ ಭಾಗಿಯಾಗಿದ್ದರು. ನಿನ್ನೆ ರಾತ್ರಿಯಿಂದ ಪುರೋಹಿತರಾದ ನಾಗೇಂದ್ರ ಭಾರದ್ವಾಜ್ ತಂಡದಿಂದ ಬಿಜೆಪಿ ಕಚೇರಿಯಲ್ಲಿ ನಡೆದ ವಾಸ್ತು ಪೂಜೆ, ಗಣ ಹೋಮ, ದುರ್ಗಾ ಹೋಮ, ಸುದರ್ಶನ ಹೋಮ ಮತ್ತು ತ್ರೈಲೋಕ್ಯ ಸುಂದರಿ ಹೋಮ ಮತ್ತು ಪೂಜಾ ಕಾರ್ಯಗಳು ನಡೆದಿದ್ದವು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago