Featured

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡನೆ  – Vishwanews24

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡನೆ

ಬೆಂಗಳೂರು: ಅನಧಿಕೃತ ಸಾಗುವಳಿ ಮಾಡುತ್ತಿರುವ ಸರಕಾರಿ ಭೂಮಿಗಳನ್ನು ಸಕ್ರಮಗೊಳಿಸಲು ನಮೂನೆ-57ರಲ್ಲಿ ಸಲ್ಲಿಸುವ ಕೊನೇ ದಿನಾಂಕವನ್ನು ಮತ್ತೂಂದು ವರ್ಷಕ್ಕೆ ವಿಸ್ತರಿಸಲು ಅವಕಾಶ ಮಾಡಿಕೊಡುವ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ-2022 ಅನ್ನು ವಿಧಾನಸಭೆಯಲ್ಲಿ  ಮಂಡಿಸಲಾಯಿತು.

ವಿಧೇಯಕ ಮಂಡಿಸಿದ ಕಂದಾಯ ಸಚಿವ ಆರ್‌. ಅಶೋಕ್‌, ಅನಧಿಕೃತ ಸಾಗುವಳಿ ವಿಚಾರಕ್ಕೆ ಸಂಬಂಧಿಸಿ 2005ರ ಜ. 1ರ ಹಿಂದಿನಿಂದ ಸಾಗುವಳಿ ಮಾಡಲಾಗುತ್ತಿರುವ, 2018ರ ಮಾ. 17ರಿಂದ 2019ರ ಮಾ. 16ರ ವರೆಗೆ ಅನಧಿಕೃತ ಸಾಗುವಳಿ ಮಾಡುತ್ತಿರುವ ಸರಕಾರಿ ಭೂಮಿಗಳನ್ನು ಸಕ್ರಮಗೊಳಿಸಲು ನಮೂನೆ-57ರಲ್ಲಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ 2019ರ ಮಾ. 10ರಿಂದ ಅರ್ಜಿಗಳನ್ನು ಸ್ವೀಕರಿಸಲಾಗಿರಲಿಲ್ಲ. ಅವಧಿ ವಿಸ್ತರಿಸುವಂತೆ ಶಾಸಕರು ಮತ್ತು ಸಾರ್ವಜನಿಕರಿಂದ ಮನವಿ ಬಂದಿತ್ತು.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ವಿಧಾನಮಂಡಳದ ಅಧಿವೇಶನ ಇಲ್ಲದ ಕಾರಣ ಅರ್ಜಿ ಸಲ್ಲಿಕೆ ಅವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿ 2022ರ ಮೇ 26ರಂದು ಆಧ್ಯಾದೇಶ ಹೊರಡಿಸಲಾಗಿತ್ತು. ಈಗ ಪ್ರಸಕ್ತ ಅಧಿವೇಶನದಲ್ಲಿ ಆಧ್ಯಾದೇಶದ ಬದಲಿಗೆ ತಿದ್ದುಪಡಿ ವಿಧೇಯಕ ತರಲಾಗಿದೆ ಎಂದು ಹೇಳಿದರು.

ಇದೇ ವೇಳೆ 2022ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತಾಸಕ್ತಿ ರಕ್ಷಣೆ (ತಿದ್ದುಪಡಿ) ವಿಧೇಯಕ, ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ) ವಿಧೇಯಕ-2022, ಕರ್ನಾಟಕ ರೇಷ್ಮೆಹುಳು ಬಿತ್ತನೆ ಮತ್ತು ರೇಷ್ಮೆ ನೂಲು (ಉತ್ಪಾದನೆ, ಸರಬರಾಜು, ವಿತರಣೆ ಮತ್ತು ಮಾರಾಟ ನಿಯಮ ವಿಧೇಯಕ 2022 ಅನ್ನು ಮಂಡಿಸಲಾಯಿತು.

ದ್ವಿಚಕ್ರ ವಾಹನಗಳಿಗೂ ಬರಲಿದೆ ಏರ್‌ಬ್ಯಾಗ್‌..ಭಾರತದಲ್ಲಿ ಏರ್‌ಬ್ಯಾಗ್‌ ಪೇಟೆಂಟ್‌ ಪಡೆದ ಹೋಂಡಾ – Vishwanews24

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

17 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

17 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

17 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

18 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

18 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago