ಹೈದರಾಬಾದ್: ತೆಲಂಗಾಣದಲ್ಲಿ ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಅಂತ ಶಪಥ ತೊಟ್ಟಿರುವ ಕಾಂಗ್ರೆಸ್, ಕರ್ನಾಟಕ ಮಾದರಿ ಗ್ಯಾರಂಟಿ ಬ್ರಹ್ಮಾಸ್ತ್ರ ಪ್ರಯೋಗಿಸಿದೆ.
ತೆಲಂಗಾಣದಲ್ಲೂ ಕಾಂಗ್ರೆಸ್ ಸರ್ಕಾರ ನೋಡುವುದು ನನ್ನ ಕನಸು ಎಂದಿರುವ ಸೋನಿಯಾ ಗಾಂಧಿ, 6 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಮಹಾಲಕ್ಷ್ಮಿ ಹೆಸರಿನಲ್ಲಿ ಮಹಿಳೆಯರಿಗೆ 2,500 ಹಾಗೂ 500 ರೂಪಾಯಿಗೆ ಗ್ಯಾಸ್ ಸಿಲಿಂಡರ್, ಮಹಿಳೆಯರಿಗೆ ಫ್ರೀ ಬಸ್, ಕ್ವಿಂಟಾಲ್ ಭತಕ್ಕೆ 500 ಬೋನಸ್, 200 ಯೂನಿಟ್ ಫ್ರೀ ಕರೆಂಟ್, ಮನೆ ಇಲ್ಲದವರಿಗೆ ಇಂದಿರಮ್ಮ ಗೃಹ ಯೋಜನೆ ಸೇರಿದಂತೆ ಹಲವು ಭರವಸೆ ನೀಡಿದ್ದಾರೆ.
ಇದನ್ನೂ ಓದಿ:
ತುಕ್ಕುಗೂಡದ ‘ವಿಜಯಭೇರಿ’ ಸಾರ್ವಜನಿಕ ಸಭೆಯಲ್ಲಿ ಭಾನುವಾರ ತೆಲಂಗಾಣಕ್ಕೆ ಆರು ಗ್ಯಾರಂಟಿಗಳನ್ನು ಸೋನಿಯಾ ಗಾಂಧಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ, ತಕ್ಷಣ ಯೋಜನೆಗಳು ಜಾರಿಯಾಗಲಿವೆ ಎಂದು ಭರವಸೆ ನೀಡಿದ್ದಾರೆ.
ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ರಾಜ್ಯದಲ್ಲಿ ಗೆಲುವಿಗೆ ಕಾರಣವಾಗಿದ್ದ ಗ್ಯಾರಂಟಿಗಳ ಸೂತ್ರವನ್ನು ತೆಲಂಗಾಣದಲ್ಲೂ ಜಾರಿಗೊಳಿಸಲು ಕಾಂಗ್ರೆಸ್ ಮುಂದಾಗಿದೆ.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…