Featured

ಕರ್ನಾಟಕ ಯೂತ್ ಕಾಂಗ್ರೆಸ್: ಉದ್ಯೋಗ ಸೃಷ್ಟಿ ಆ್ಯಪ್ ಬಿಡುಗಡೆ -ಉಡುಪಿ ಜಿಲ್ಲೆಯಲ್ಲಿ ನಿರುಧ್ಯೋಗಿಗಳ ಸರ್ವೆ-ಉದ್ಯೋಗ ಕೊಡಿಸಲು ಪ್ರಯತ್ನ: vishwanews24

ಕರ್ನಾಟಕ ಯೂತ್ ಕಾಂಗ್ರೆಸ್: ಉದ್ಯೋಗ ಸೃಷ್ಟಿ ಆ್ಯಪ್ ಬಿಡುಗಡೆ -ಉಡುಪಿ ಜಿಲ್ಲೆಯಲ್ಲಿ ನಿರುಧ್ಯೋಗಿಗಳ ಸರ್ವೆ-ಉದ್ಯೋಗ ಕೊಡಿಸಲು ಪ್ರಯತ್ನ: vishwanews24

ಉಡುಪಿ:ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಾಲ್ಪಡ್ ರವರ ಆದೇಶದಂತೆ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಯೂಥ್ ಜೂಡೋ ಬೂತ್ ಜೋಡೋ ಎನ್ನುವ ಕಾರ್ಯಕ್ರಮ ಹಾಗೂ ಉದ್ಯೋಗ ಸೃಷ್ಟಿ ಎನ್ನುವ ಆಫ್ ಬಿಡುಗಡೆ ಮಾಡಿದ್ದೇವೆ. ಈ ಒಂದು ಆ್ಯಪ್ ನಲ್ಲಿ ಉಡುಪಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬ್ಲಾಕ್‌ಗಳಲ್ಲಿ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ನಿರುದ್ಯೋಗಿಗಳ ಸರ್ವೇಯನ್ನು ಮಾಡುತ್ತಿದ್ದೇವೆ. ಇದರಿಂದ ಉಡುಪಿ ಜಿಲ್ಲೆಯಲ್ಲಿ ಎಷ್ಟು ನಿರುದ್ಯೋಗಿಗಳಿದ್ದಾರೆ ಎನ್ನುವ ಸಂಖ್ಯೆಯನ್ನು ಹುಡುಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಉದ್ಯೋಗ ಸೃಷ್ಟಿಯ ಬಗ್ಗೆ ವಿವರ ನೀಡಿ ಮುಂದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಾವು ಯಾವ ರೀತಿ ಉದ್ಯೋಗ ಸೃಷ್ಟಿ ಮಾಡುವ ಯೋಜನೆಯನ್ನು ಹಾಕಿಕೊಳ್ಳಬೇಕು. ಎಂದು ನಮ್ಮ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಸಂಯೋಜಕ ತೇಜಸ್ವಿ ಅವರು ಹೇಳಿದರು.
ಜಿಲ್ಲೆಯ ಪ್ರತಿ ವಿಧಾನ ಸಭಾ ಕ್ಷೇತ್ರದ ಬೂತ್ ಮಟ್ಟದಲ್ಲಿ ಸರ್ವೆ ಕಾರ್ಯ ನಡೆಯಲಿದೆ -ಸರ್ವೆಯಲ್ಲಿ ಸಿಕ್ಕಿದ ಅಂಕಿ ಅಂಶಗಳ ಪ್ರಕಾರ ಡೇಟಾ ಸಮೇತವಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಿಳಿಯಪಡಿಸಿ ಉದ್ಯೋಗ ಸೃಷ್ಟಿಗೆ ಒತ್ತು ಹಾಕಲಾಗುವುದು ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಭವ್ಯ ತಿಳಿಸಿದರು .
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ನವೀನ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ,ಕಾಪು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ರಮೀಝ್,ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

54 minutes ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

1 hour ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

2 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

2 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

3 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

3 hours ago