ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ (ಜೂ 20, 21) ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರು ಹಾಗೂ ಮೈಸೂರಿಗೆ ಆಗಮಿಸುತ್ತಿದ್ದಾರೆ.
ಇದಕ್ಕೂ ಮುನ್ನ ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು ನಾನು ಕರ್ನಾಟಕಕ್ಕೆ ಹೋಗುತ್ತಿರುವೆ ಎಂದಿದ್ದಾರೆ. ‘ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ ಭಾರತೀಯ ವಿಜ್ಞಾನ ಭವನದಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು’ ಎಂದಿದ್ದಾರೆ.
‘ಸೋಮವಾರ ಮಧ್ಯಾಹ್ನ, ಡಾ.ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ ಮಾಡಲಿದ್ದೇನೆ. 150 ಟೆಕ್ ಹಬ್‌ಗಳ ಲೋಕಾರ್ಪಣೆ ಕೂಡ ಮಾಡುವೆ’ ಎಂದಿದ್ದಾರೆ.
‘ಬೆಂಗಳೂರಿನ ಕಾರ್ಯಕ್ರಮದಲ್ಲಿ, ₹27,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗು ಸುತ್ತಮುತ್ತಲಿನ ಜನರ ‘ಸುಗಮ ಜೀವನ’ಕ್ಕೆ ನೆರವಾಗಲಿದೆ’ ಎಂದು ಪ್ರಧಾನಿ ಹೇಳಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…