Featured

ಕರ್ನಾಟಕ ರಾಜ್ಯದ ಪ್ರವಾಸಿ ತಾಣಗಳ ಪಟ್ಟಿಗೆ ಸೇರ್ಪಡೆಯಾದ ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ – Vishwanews24

ಕರ್ನಾಟಕ ರಾಜ್ಯದ ಪ್ರವಾಸಿ ತಾಣಗಳ ಪಟ್ಟಿಗೆ ಸೇರ್ಪಡೆಯಾದ ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ

ಮೂಲ್ಕಿ : ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಕರ್ನಾಟಕ ರಾಜ್ಯದ ಪ್ರವಾಸಿ ತಾಣಗಳ ಸೇರ್ಪಡೆಯಾಗಿದ್ದು ಭಕ್ತರ ಹರ್ಷಕ್ಕೆ ಕಾರಣವಾಗಿದೆ.

ರಾಜ್ಯ ಪ್ರವಾಸೋದ್ಯಮ ಇಲಾಖೆ ಗುರುತಿಸಿರುವ ಪ್ರವಾಸಿ ತಾಣಗಳ ಪಟ್ಟಿಗೆ ಬಪ್ಪನಾಡು ದೇವಸ್ಥಾನವನ್ನು ಸೇರ್ಪಡೆಗೊಳಿಸಬೇಕೆಂದು ಭಕ್ತರ ಪರವಾಗಿ ಜೀವನ್ ಕೆ. ಶೆಟ್ಟಿ ಅವರು ಸರಕಾರಕ್ಕೆ ಮನವಿ ಮಾಡಿದ್ದರು.

ರಾಜ್ಯ ಪ್ರವಾಸೋದ್ಯಮ ಸಚಿವರಾದ ಸಿ.ಪಿ.ಯೋಗೀಶ್ವರ್, ಮಾಜಿ ಸಚಿವ ಪಿ.ಜಿ. ಆರ್. ಸಿಂಧ್ಯಾ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು, ರಾಜ್ಯ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು, ಹಿಂದಿನ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರಿಗೆ ಮನವಿ ಮಾಡಲಾಗಿತ್ತು.

ಸಸಿಹಿತ್ಲು ಬೀಚ್- ಭಗವತಿ ಕ್ಷೇತ್ರ-ಉಮಾಮಹೇಶ್ವರಿ ದೇವಸ್ಥಾನ(ಹೊಯ್ಗೆಗುಡ್ಡೆ)-ಚಿತ್ರಾಪು- ಕಲ್ಲಸಂಕ-ಪಡುಬೈಲು ಕೋರ್ದಬ್ಬು ದೈವಸ್ಥಾನ- ಕೊಳಚಿಕಂಬಳ ಮಂತ್ರ ಸರ್ಫಿಂಗ್ -ಬಪ್ಪನಾಡು ದೇವಸ್ಥಾನ ಇದನ್ನು ಟೂರಿಸಂ ಕಾರಿಡಾರ್ ಆಗಿ ಪರಿಗಣಿಸಿ ಅಭಿವೃದ್ಧಿಪಡಿಸಿದ್ದಲ್ಲಿ ಮುಲ್ಕಿ ತಾಲೂಕಿನಲ್ಲಿ ಪರಿಸರಸ್ನೇಹಿ ಪ್ರವಾಸೋದ್ಯಮವನ್ನು ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹಿಸಿದಂತಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವರಿಗೆ ವಿವರಿಸಲಾಗಿತ್ತು.

ಬಪ್ಪ ಬ್ಯಾರಿಗೆ ದೇವಿ ಅನುಗ್ರಹ ನೀಡಿ ನೆಲೆನಿಂತಿರುವ ಕಾರಣಿಕ ತಾಣವಾದ ಬಪ್ಪನಾಡು ದೇವಸ್ಥಾನಕ್ಕೆ ಪ್ರತಿನಿತ್ಯ ಅಸಂಖ್ಯ ಭಕ್ತರು ಆಗಮಿಸುತ್ತಾರೆ. ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್ ನಲ್ಲಿ ದೇವಸ್ಥಾನದ ಅಧಿಕೃತ ಮಾಹಿತಿ ಇಲ್ಲದೇ ಇರುವುದು ಹೊರಗಿನಿಂದ ಬರುವ ಭಕ್ತರಿಗೆ ಸಮಸ್ಯೆಯಾಗುತ್ತಿತ್ತು. ಈ ಬಗ್ಗೆ ಸ್ಪಂದಿಸಿದ ಸರಕಾರ ದೇವಸ್ಥಾನವನ್ನು ರಾಜ್ಯ ಪ್ರವಾಸಿ ತಾಣಗಳ ಪಟ್ಟಿಗೆ ಸೇರಿಸಿ ಸುತ್ತೋಲೆ ಹೊರಡಿಸಿದೆ. ಇದು ಕ್ಷೇತ್ರದ ಭಕ್ತರಿಗೆ ಖುಷಿಯ ವಿಚಾರ, ನಮ್ಮ ಮನವಿಗೆ ಸ್ಪಂದಿಸಿದ ಸಚಿವರಿಗೆ ಧನ್ಯವಾದಗಳು ಎಂದು ಜೀವನ್ ಕೆ. ಶೆಟ್ಟಿ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago