ಕಾಪು: ೨೦೨೨ ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಕಾಪು ತಾಲೂಕಿನ ಮೂಳೂರು ಗ್ರಾಮದ ದೈವನರ್ತಕ ಗುಡ್ಡ ಪಾಣರ ಅವರ ಮನೆಗೆ ಉಡುಪಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಮತ್ತು ತಂಡ ಭೇಟಿ ನೀಡಿ ಗೌರವ ಸಲ್ಲಿಸಿದರು.
ಸುಮಾರು ೪೮ ವರ್ಷಗಳಿಂದ ಕರಾವಳಿ ಭಾಗದಲ್ಲಿ ವಿವಿಧ ದೈವಗಳ ಸೇವೆ ಸಲ್ಲಿಸುತ್ತಿರುವ ಪಾಣರ ಇವರು ಕಳೆದ ೩೮ ವರ್ಷಗಳಿಂದ ಕಾಪು ಗುರು ಬ್ರಹ್ಮ ಮುರ್ಗೆಕಲ ದೈವಸ್ಥಾನದಲ್ಲಿ ಪಿಲಿಚಂಡಿ ದೈವಕ್ಕೆ “ಪಿಲಿಕೋಲ” ದ ಸೇವೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ.
ಪ್ರಶಸ್ತಿಗೆ ಅರ್ಜಿ ಹಾಕದೇ ರಾಜ್ಯದ ಮಹೋನ್ನತ ಪ್ರಶಸ್ತಿಗೆ ಭಾಜನರಾಗಿರುವ ಗುಡ್ಡ ಪಾಣರ ಅವರ ಮನೆಗೆ ಸೋಮವಾರ ಬೆಳಗ್ಗೆ ಭೇಟಿ ನೀಡಿದ ಶ್ರೀಶ ನಾಯಕ್ ಹಾರ-ತುರಾಯಿಗಳೊಂದಿಗೆ ಸನ್ಮಾನಿಸಿ ಗೌರವ ಸಲ್ಲಿಸಿ ಆರ್ಶಿವಾದ ಪಡೆದುಕೊಂಡರು.
ತದನAತರ ಮಾಧ್ಯಮದ ಜತೆ ಮಾತನಾಡಿದ ಅವರು”ನವ ಭಾರತದಲ್ಲಿ ಪ್ರಶಸ್ತಿಗಳ ಹಿಂದೆ ಹೋಗುವ ಕಾಲ ಕಳೆದು ಹೋಗಿದೆ ಈಗ ಏನಿದ್ದರು ಅರ್ಹರ ಮನೆಗೆ ಪ್ರಶಸ್ತಿ ಹುಡುಕಿಕೊಂಡು ಬರುತ್ತಿದೆ ಅಂತಹದೇ ಕೆಲಸ ಇಂದು ರಾಜ್ಯ ಸರ್ಕಾರ ಮಾಡಿದೆ. ತುಳುನಾಡು ಎಂಬುದು ದೈವ ದೇವರ ನೆಲೆಬೀಡು ಅಂತಹ ಪುಣ್ಯದ ಮಣ್ಣಿನಲ್ಲಿ ಹುಟ್ಟಿ ಬೆಳೆದು ನಿರಂತರ ೪೮ ವರ್ಷಗಳಿಂದ ದೈವನರ್ತಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಈ ಪ್ರಶಸ್ತಿ ಹರಸಿ ಬಂದಿರುವುದು ಹರ್ಷ ತಂದಿದೆ ಎಂದರು.
ಈ ಸಂಧರ್ಭದಲ್ಲಿ ಅಲ್ಪ ಸಂಖ್ಯಾತ ಮೋರ್ಚದ ಅಧ್ಯಕ್ಷ ದಾವೂದ್ ಅಬೂಬ್ಬಕ್ಕರ್, ಅನಿಲ್ ಶೆಟ್ಟಿ ಮಾಂಬೆಟ್ಟು, ಪುರಸಭಾ ಸದಸ್ಯ ಅನಿಲ್ ಕುಮಾರ್ ಕಾಪು, ನವೀನ್ ಎಸ್.ಕೆ, ಪ್ರವೀಣ್ ಪೂಜಾರಿ ಉಪಸ್ಥಿತರಿದ್ದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…