Featured

ಕರ್ನಾಟಕ ರಾಜ್ಯ ಕಂಬಳ ಸಂಘಕ್ಕೆ ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ – vishwanews24

ಕರ್ನಾಟಕ ರಾಜ್ಯ ಕಂಬಳ ಸಂಘಕ್ಕೆ ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ

ಮಂಗಳೂರು : ಉಡುಪಿ ಮೂಲದ ಕರ್ನಾಟಕ ರಾಜ್ಯ ಕಂಬಳ ಸಂಘಕ್ಕೆ ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ ದೊರೆತಿದೆ. ಈ ಮಾನ್ಯತೆಯು ಕಂಬಳ ಸ್ಪರ್ಧೆಗಳನ್ನು ರಾಜ್ಯಾದ್ಯಂತ ನಡೆಸಲು ಮತ್ತು ಮೇಲ್ವಿಚಾರಣೆ ಮಾಡಲು ಸಂಘಕ್ಕೆ ಅಧಿಕಾರ ನೀಡುತ್ತದೆ, ಜೊತೆಗೆ ವಾರ್ಷಿಕ ಸರ್ಕಾರಿ ಅನುದಾನ ಪಡೆಯಲು ದಾರಿ ಮಾಡಿಕೊಟ್ಟಿದೆ. ಕಂಬಳವನ್ನು ರಾಜ್ಯ ಕ್ರೀಡಾ ಬಜೆಟ್‌ನಲ್ಲಿ ಸೇರಿಸಲಾಗುವುದು ಮತ್ತು ಮುಖ್ಯವಾಹಿನಿಯ ಕ್ರೀಡೆಗಳ ಸೌಲಭ್ಯಗಳು ದೊರೆಯಲಿವೆ.

ಕಂಬಳ ಕ್ರೀಡೆಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ಗೆ ಮಾನ್ಯತೆ ನೀಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶ ಹೊರಡಿಸಿದೆ. ಈ ಮಾನ್ಯತೆಯು ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಅನ್ವಯವಾಗಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಚೇತನ್ ಆರ್‌. ಅವರು ಈ ಆದೇಶದಲ್ಲಿ ತಿಳಿಸಿದ್ದಾರೆ.

ಕಂಬಳ ಕ್ರೀಡೆಯನ್ನು ಸಂಘಟಿಸುವ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್‌ಗೆ ಮಾನ್ಯತೆ ನೀಡುವಂತೆ ಕೋರಿ ಸಂಸ್ಥೆಯ ಅಧ್ಯಕ್ಷರು ಕರ್ನಾಟಕ ಕ್ರೀಡಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಸೋಸಿಯೇಷನ್‌ಗೆ ಮಾನ್ಯತೆ ನೀಡಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಿಫಾರಸು ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ 2025ರ ಮೇ 5ರಂದು ನಡೆದ ಸಭೆಯಲ್ಲಿ ರಾಜ್ಯದ ಗ್ರಾಮೀಣ ಕ್ರೀಡೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಹಾಗೂ ಕಂಬಳ ಕ್ರೀಡೆಯ ವಿಶೇಷತೆಯನ್ನು ಪರಿಗಣಿಸಿ ಅದಕ್ಕೆ ಮಾನ್ಯತೆ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು.

ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷರಾಗಿರುವ ಈ ಅಸೋಷಿಯೇಷನ್‌ನಲ್ಲಿ 18 ಮಂದಿ ಪದಾಧಿಕಾರಿಗಳಿದ್ದಾರೆ. ಜೀವಂಧರ್ ಬಲ್ಲಾಳ್‌, ಜೀವನದಾಸ ಅಡ್ಯಂತಾಯ ಹಾಗೂ ಗುಣಪಾಲ ಕಡಂಬ ಗೌರವ ಸಲಹೆಗಾರರಾಗಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಂಬಳವನ್ನು ಶಿಸ್ತುಬದ್ಧವಾಗಿ ಸಂಘಟಿಸಲು ಈ ಅಸೋಸಿಯೇಷನ್‌ ಕ್ರಮ ವಹಿಸುತ್ತದೆ. ಕಂಬಳ ಕ್ರೀಡೆಯ ವೇಳಾಪಟ್ಟಿಯನ್ನು ತಯಾರಿಸುತ್ತದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago