ಕಲಬುರಗಿ: ಇಲ್ಲಿನ ಏರ್‌ಪೋರ್ಟ್ ಗೆ ಬಾಂಬ್ ಬೆದರಿಕೆ ಹಾಕಿರುವ ಪ್ರಸಂಗವೊಂದು ನಡೆದಿದೆ.
ಏರ್‌ಪೋರ್ಟ್ ಮೇಲ್ ಐಡಿಗೆ ಅನಾಮಧೇಯ ವ್ಯಕ್ತಿಯಿಂದ ಮೇಲ್ ಬಂದಿದ್ದು, ಏರ್‌ಪೋರ್ಟ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ವಿಷಯ ಬಯಲಾಗುತ್ತಿದ್ದಂತೆಯೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರು ದೌಡಾಯಿಸಿದ್ದಾರೆ.
ಬೆದರಿಕೆ ಮೇಲ್‍ನಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರಯಾಣಿಕರ ಬ್ಯಾಗ್‍ಗಳ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೇ ಏರ್‌ಪೋರ್ಟ್ ನ ಇಂಚಿಂಚು ಸ್ಥಳ ಪರಿಶೀಲನೆ ಪೊಲೀಸರು ನಡೆಸುತ್ತಿದ್ದಾರೆ.
ಕಂದಾಯ ಸಚಿವ ಕೃಷ್ಣೆಬೈರೇಗೌಡ ಸೇರಿ ಹಲವು ಪ್ರಯಾಣಿಕರಿದ್ದ ವಿಮಾನವು ಇಂದು ಬೆಳಗ್ಗೆ 9:20ಕ್ಕೆ ಬೆಂಗಳೂರಿನಿಂದ ಕಲಬುರಗಿ ಏರ್‌ಪೋರ್ಟ್ ಗೆ ಆಗಮಿಸಿದೆ. ಇತ್ತ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಏರ್‌ಪೋರ್ಟ್ ಸಿಬ್ಬಂದಿ 20 ನಿಮಿಷ ಪ್ಯಾಸೆಂಜರ್ ಗಳನ್ನ ಇಳಿಸಲಿಲ್ಲ. ಏರ್‌ಪೋರ್ಟ್ ತಪಾಸಣೆ ಬಳಿಕವೇ ಅಧಿಕಾರಿಗಳು ಪ್ರಯಾಣಿಕರನ್ನು ಕೆಳಗಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…