ಕಲಬುರಗಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳ ಕಡಿತ ಮಾಡುವುದಿಲ್ಲ ಹಾಗೂ ಕೈ ಬಿಡುವುದಿಲ್ಲ. ಜತೆಗೆ ಯಾವುದೇ ಹೊಸ ಕಂಡಿಷನ್ ಸಹ ಮಾಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.
ಗ್ಯಾರಂಟಿಗಳಿಗೆ ವಿರೋಧ ಪಕ್ಷದವರು ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಮಾನಿಟರಿಂಗ್ ಕಮಿಟಿ ಮಾಡಿದ್ದೇವೆ. ಅದಕ್ಕೂ ತಪ್ಪಾಗಿ ಮಾತನಾಡುತ್ತಿದ್ದಾರೆ. ಇದರಿಂದ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಅವರಿಗೆ ಮಾನ -ಮರ್ಯಾದೆ ಏನು ಇಲ್ಲ ಎಂದು ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಎಷ್ಟು ಜಾಗವನ್ನು ಆರ್‌ಎಸ್‌ಎಸ್ ಹಾಗೂ ಅಂಗ ಸಂಸ್ಥೆಗಳಿಗೆ ಕೊಟ್ಟಿದೆ? ಪಟ್ಟಿ ಮಾಡಿ ಹೇಳಲಿ ನೋಡೋಣ. ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗಲೂ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಅಂಗ ಸಂಸ್ಥೆಗಳಿಗೆ ಸಾಕಷ್ಟು ಜಮೀನು ನೀಡಿದೆ. ನಾವು ಅವರಂತೆ ಕೆಲಸ ಮಾಡಿಲ್ಲ. ಕೇಂದ್ರ ಸರ್ಕಾರ ಹಾಗೂ ರಾಜ್ಯದಲ್ಲಿನ ಹಿಂದಿನ ಬಿಜೆಪಿ ಸರ್ಕಾರ ಅಂಗ ಸಂಸ್ಥೆಗಳಿಗೆ ಭೂಮಿ ಕೊಟ್ಟಿದ್ದರ ಬಗ್ಗೆ ಧ್ವನಿ ಎತ್ತುತ್ತಿದ್ದೇವೆ ಎಂದು ಹೇಳಿದರು.
ಸರಕಾರಿ ವೈದ್ಯರ ನಿವೃತ್ತಿ ವಯಸ್ಸು 65 ಕ್ಕೆ ಹೆಚ್ಚಿಸುವ ಚಿಂತನೆವಿದೆ. ಆದರೆ ಎಲ್ಲಾ ವೈದ್ಯರಿಗಲ್ಲ. ಸೂಪರ್ ಸ್ಪೆಷಲಿಸ್ಟ್ ಗಳಿಗೆ ಮಾತ್ರ ಹೆಚ್ಚಿಸುವ ಬಗ್ಗೆ ಉದ್ದೇಶ ಹೊಂದಲಾಗಿದೆ. ಮೂರು ದಿನಗಳ ಹಿಂದೆ ಬೆಂಗಳೂರು ಜಯದೇವಕ್ಕೆ ಹೋಗಿದ್ದಾಗ ವೈದ್ಯರು ಮನವಿ ಮಾಡಿಕೊಂಡಿದ್ದಾರೆ. ಸೂಪರ್ ಸ್ಪೆಷಾಲಿಟಿ ವೈದ್ಯರು, ಎಂಬಿಬಿಎಸ್, ಎಂಡಿ, ಡಿಎಂ ಮಾಡಲು ಜಾಸ್ತಿ ಸಮಯ ಬೇಕಾಗುತ್ತೆ. ಹೀಗಾಗಿ ಅವರಿಗೆ ಸೇವೆಗೆ ಕಡಿಮೆ ಸಮಯ ಸಿಗುವ ಹಿನ್ನೆಲೆಯಲ್ಲಿ ಅವರ ಸೇವಾವಧಿ ಹೆಚ್ಚಿನ ಮಾಡುವ ಆಲೋಚನೆಯಿದೆ. ಸಿಎಂ ಜತೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಚಿವರು ವಿವರಣೆ ನೀಡಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…