ಕೆನರಾ ಬಸ್ ಮಾಲಕರ ಸಹಕಾರದಿಂದ ಯಕ್ಷಗಾನ ಕಲಾರಂಗ ಕಳೆದ ಹಲವು ವರ್ಷಗಳಿಂದ ವೃತ್ತಿ ಮೇಳದ ಕಲಾವಿದರಿಗೆ ಪ್ರತಿಶತ ೫೦ ರಿಯಾಯಿತಿ ದರದಲ್ಲಿ ಪಾಸ್ ನೀಡುತ್ತಾ ಬಂದಿದ್ದು, ಈ ವರ್ಷದ ಆಗಸ್ಟ್ ೩೧, ೨೦೨೨ರ ವರೆಗೆ ಅನ್ವಯವಾಗುವಂತೆ ಕೊಡಮಾಡಿದ ಬಸ್ ಪಾಸ್ ವಿತರಣಾ ಕಾರ್ಯಕ್ರಮ ಇಂದು (೧೮-೧೨-೨೦೨೧) ಸಂಸ್ಥೆಯ ಕಚೇರಿಯಲ್ಲಿ ಜರಗಿತು. ಹಿರಿಯ ಸ್ತಿçÃವೇಷಧಾರಿ ಡಾ. ಕೋಳ್ಯೂರು ರಾಮಚಂದ್ರ ರಾವ್ ಮೇಳದ
ಪ್ರತಿನಿಧಿಗಳಿಗೆ ವಿತರಿಸಿದರು. ಮಂದಾರ್ತಿ ಮೇಳದ ಮಹಾಬಲ ನಾಯ್ಕ್, ಕೇಶವ ಆಚಾರ್ ಮತ್ತು ಮಾರಣಕಟ್ಟೆ ಮೇಳದ ಶ್ರೀನಿವಾಸ ಶೆಟ್ಟಿ ಸ್ವೀಕರಿಸಿದರು. ೩೫ ವಿವಿಧ ಮೇಳಗಳ ೪೦೦ಕ್ಕೂ ಮಿಕ್ಕಿದ ಕಲಾವಿದರು ಪಾಸ್ ಸೌಲಭ್ಯ ಪಡೆಯಲಿದ್ದಾರೆ.
ಸಂಸ್ಥೆಯ ಅಧ್ಯಕ್ಷ ಎಮ್. ಗಂಗಾಧರ ರಾವ್ ಸ್ವಾಗತಿಸಿದರು. ಪದಾಧಿಕಾರಿಗಳಾದ ಎಸ್. ವಿ. ಭಟ್, ವಿ. ಜಿ. ಶೆಟ್ಟಿ, ನಾರಾಯಣ ಎಮ್. ಹೆಗಡೆ, ಮನೋಹರ ಕೆ., ಅನಂತರಾಜ ಉಪಾಧ್ಯ ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿ, ವೃತ್ತಿ ಕಲಾವಿದರಿಗೆ ಈ ಸೌಲಭ್ಯ ಕಲ್ಪಿಸಿದ ಕೆನರಾ ಬಸ್ ಮಾಲಕರ ಸಂಘದ ಪದಾಧಿಕಾರಿಗಳಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…