ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದ್ದು, ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡಿದೆ.
ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್ ಎಂಬವರಿಗೆ ಗಂಭೀರ ಗಾಯವಾಗಿದ್ದು, ಮೂವರು ಸಿಬ್ಬಂದಿಗೆ ಸಣ್ಣ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜ್ಯುವೆಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ಡ್ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿತ್ತು. ಗ್ಯಾಸ್ ಭರ್ತಿ ಮಾಡಲು ಇಬ್ಬರು ಕಾರ್ಮಿಕರು ಮಳಿಗೆಗೆ ಬಂದಿದ್ದರು. ಎಸಿಗೆ ಗ್ಯಾಸ್ ತುಂಬಿಸುವಾಗ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು. ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಅಂಗಡಿ ಮತ್ತು ಸುತ್ತಮುತ್ತಲಿನ ಕಿಟಕಿಗಳು ಒಡೆದು ಹೋಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…