ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ‘ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ’ ಸೃಜಿಸಿ ಆದೇಶ ಹೊರಡಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವು ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮದಲ್ಲಿರುವ ಪ್ರದೇಶದ ಜನರ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.
ಕಲ್ಯಾಣ ಕರ್ನಾಟಕದ ಬಹುಕಾಲದ ಬೇಡಿಕೆಯಾಗಿದ್ದ ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಮಂಗಳವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಿ ಆದೇಶಿಸಿದಲ್ಲದೆ, ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರು ಈ ನೂತನ ಇಲಾಖೆಯ ಕಾರ್ಯದರ್ಶಿಯಾಗಿ ಮತ್ತು ಮಂಡಳಿಯ ಎಲ್ಲಾ ಅಧಿಕಾರಿ ಸಿಬ್ಬಂದಿಯನ್ನೊಳಗೊಂಡ ಇಲಾಖೆಯು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮತ್ತು ಅನುಚ್ಛೇಧ 371(ಜೆ) ಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸಬೇಕೆಂದು ಆದೇಶಿಸಲಾಗಿದೆ.
ಮುಂದುವರಿದು, ಪ್ರದೇಶದಲ್ಲಿನ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿಬ್ಬಂದಿಯ ಕೊರತೆ ಇರುವ ಕಾರಣ ಸದರಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಹಾಗೂ ಆ ಪ್ರದೇಶ ಏಳು ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಮಂಜೂರು ಮಾಡಿ ಬಲಪಡಿಸಲು ಸಹ ನಿರ್ಧರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಳೆದ ವರ್ಷ ಕಲಬುರಗಿಯಲ್ಲಿ ಸೆ.17ರಂದ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಒಂದು ಪ್ರತ್ಯೇಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯವನ್ನು ಸ್ಥಾಪಿಸಲು ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿತ್ತು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…