ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸ್ಥಾಪನೆಯಾದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ನೀಡಲಾಗುತ್ತಿರುವ ₹1500 ಕೋಟಿ ಅನುದಾನದ ಜತೆಗೆ ಹೆಚ್ಚುವರಿ ₹1500 ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರಾಜ್ಯ ಸರ್ಕಾರ ಇಲ್ಲಿಯವರೆಗೆ ₹8 ಸಾವಿರ ಕೋಟಿಗೂ ಅಧಿಕ ಮೊತ್ತವನ್ನು ಬಿಡುಗಡೆ ಮಾಡಿದ್ದೇವೆ. ಆ ಪೈಕಿ ₹6 ಸಾವಿರ ಕೋಟಿ ಖರ್ಚಾಗಿದೆ. ಉಳಿದ ₹2 ಸಾವಿರ ಕೋಟಿಯನ್ನು ಬರುವ ಮಾರ್ಚ್‌ನೊಳಗೆ ಖರ್ಚು ಮಾಡಬೇಕು. ಅಂದಾಗ ಮಾತ್ರ ಹೆಚ್ಚುವರಿ ₹1500 ಕೋಟಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಷರತ್ತು ವಿಧಿಸಿದರು.
371 (ಜೆ) ಕಲಂನಡಿ ಯೋಜನೆಗಳನ್ನು ಜಾರಿಗೊಳಿಸುವ ಹೊಣೆ ಹೊತ್ತಿರುವ ಕೋಶವನ್ನು ಕಲಬುರ್ಗಿಗೆ ಸ್ಥಳಾಂತರಿಸಲಾಗುವುದು.
‘ನಾನು ಯಾವುದೇ ಹೊಸ ಘೋಷಣೆಗಳನ್ನು ಹೊರಡಿಸುವುದಿಲ್ಲ. ಈಗಾಗಲೇ ಇರುವ ಯೋಜನೆಗಳನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಗಮನ ಹರಿಸುತ್ತೇನೆ’ ಎಂದರು.
ನಂಜುಂಡಪ್ಪ ವರದಿ ಅನ್ವಯ ಈ ಭಾಗದ ಆರ್ಥಿಕ, ಶೈಕ್ಷಣಿಕ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ವರದಿ ಅನ್ವಯ ಐದು ವರ್ಷಗಳಲ್ಲಿ ಹೊಸ ರೂಪದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ನಂಜುಂಡಪ್ಪ ವರದಿ ಅನ್ವಯ ನಡೆಯಲಿರುವ ಕಾಮಗಾರಿಗಳ ಬಗ್ಗೆ ಪ್ರತಿ ಮೂರು ತಿಂಗಳಿಗೊಮ್ಮೆ ಖುದ್ದು ಪರಿಶೀಲನೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.
ಕೆಕೆಆರ್‌ಡಿಬಿಗೆ ₹3 ಸಾವಿರ ಕೊಟ್ಟಿದ್ದೇನೆ ಎಂದು ಸರ್ಕಾರದಿಂದ ಈ ಭಾಗಕ್ಕೆ ನೀಡಲಿರುವ ಇತರೆ ಇಲಾಖೆಗಳ ಅನುದಾನಕ್ಕೆ ಕತ್ತರಿ ಹಾಕುವುದಿಲ್ಲ. ಉಳಿದ ಜಿಲ್ಲೆಗಳಿಗೆ ಎಷ್ಟು ಸಿಗುತ್ತದೋ ಅಷ್ಟೂ ಅನುದಾನ ಈ ಜಿಲ್ಲೆಗಳಿಗೆ ಸಿಗಲಿದೆ ಎಂದು ಅವರು ಭರವಸೆ ನೀಡಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…