ಕಲ್ಲಡ್ಕ: ಕಾರಿನೊಳಗೆ ವ್ಯಕ್ತಿಯೋರ್ವನು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿ ಜಗದೀಶ್ ಮೃತಪಟ್ಟ ಯುವಕ.
ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು , ಕಳೆದ ಕೆಲವು ವರ್ಷಗಳ ಹಿಂದೆ ವಿಡಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು.ಭಾನುವಾರ ಬೆಳಿಗ್ಗೆ ಬಾವನ ಜೊತೆ ಬೆಳಿಗ್ಗೆ ತರವಾಡು ಮನೆಯಲ್ಲಿ ದೈವದ ಕಾರ್ಯಕ್ಕೆ ಮಕ್ಕಳ ಜೊತೆ ಹೋಗಿದ್ದರು. ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕ ತಲುಪಿದಾಗ ಸುಮಾರು 1.30 ಗಂಟೆಗೆ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಬಾವನಲ್ಲಿ ಹೇಳಿದ್ದು ನಾನು ಮತ್ತೆ ಮನೆಗೆ ಬರುತ್ತೇನೆ ನೀವು ಮಕ್ಕಳ ಜೊತೆ ಮನೆಗೆ ಹೋಗಿ ಎಂದು ಕಳುಹಿಸಿ, ಕಾರಿನ ಸೀಟಿನಲ್ಲಿಯೇ ಮಲಗಿದ್ದರು.
ಆದರೆ ರಾತ್ರಿ 7 ಗಂಟೆಯಾದರೂ ಈತ ಮನೆಗೆ ಬಾರದ ಹಿನ್ನೆಲೆಯಲ್ಲಿ ಮತ್ತೆ ಬಂದು ನೋಡಿದಾಗ ಕಾರಿನ ಸೀಟಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿರುವುದು ಹೊರಗಿನಿಂದ ಕಂಡುಬಂದಿದೆ.
ಕಾರಿನ ಗ್ಲಾಸ್ ಹಾಕಿ ಮಲಗಿದ್ದರಿಂದ ಕಾರಿನ ಡೋರ್ ಓಪನ್ ಮಾಡಿದಾಗ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.
ಕಾರಿನ ಕಿಟಕಿ ,ಬಾಗಿಲನ್ನು ಮುಚ್ಚಿ ಮಲಗಿದ್ದರಿಂದ ಗಾಳಿ ಇಲ್ಲದೆ ಸಾವನ್ನಪ್ಪಿರುವುದೇ? ಅಥವಾ ಇನ್ನಾವುದೇ ಕಾಯಿಲೆಯಿಂದ ಮೃತಪಟ್ಟಿದ್ದಾನಾ? ಎಂಬುದು ವೈದ್ಯಕೀಯ ರಿಪೋರ್ಟ್ ಹಾಗೂ ಪೊಲೀಸ್ ತನಿಖೆಯ ಬಳಿಕ ತಿಳಿಯಬೇಕಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…