ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ದೇವಾಲಯವನ್ನು ನಿರ್ಮಿಸಲು ಕಲ್ಲುಗಳನ್ನು ಮಾತ್ರ ಬಳಸಲಾಗುವುದು ಮತ್ತು ಇದು 1,000 ವರ್ಷಗಳಿಗೂ ಹೆಚ್ಚು ಕಾಲ ಬಾಳಿಕೆ ಬರುತ್ತದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಬುಧವಾರ ಹೇಳಿದ್ದಾರೆ.
ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಯ ಹಿರಿಯ ಕಾರ್ಯಕಾರಿಯೂ ಆಗಿರುವ ರಾಯ್, ಐಐಟಿ-ಚೆನ್ನೈ ಮತ್ತು ಕೇಂದ್ರ ಕಟ್ಟಡ ಸಂಶೋಧನಾ ಸಂಸ್ಥೆ (ಸಿಬಿಆರ್‌ಐ) ಯಿಂದ ದೇಶದ ಅತ್ಯುತ್ತಮ ದೇವಾಲಯದ ನಿರ್ಮಾಣ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿವೆ ಎಂದು ಹೇಳಿದರು.
ದೇವಾಲಯದ ನಿರ್ಮಾಣವನ್ನು ಲಾರ್ಸೆನ್ ಮತ್ತು ಟೌಬ್ರೊ ನೋಡಿಕೊಳ್ಳಲಿದ್ದು, ಐಐಟಿ ಚೆನ್ನೈಯನ್ನು ಮಣ್ಣಿನ ಗಟ್ಟಿತನದ ಪರೀಕ್ಷೆಗೆ ಮತ್ತು ಸಿಬಿಆರ್ ಸೇವೆಯನ್ನು ಮಂದಿರದ ಕಟ್ಟಡ ಭೂಕಂಪವನ್ನು ತಡೆದುಕೊಳ್ಳುವ ಶಕ್ತಿ ಹೊಂದಿರುತ್ತದೆಯೇ ಎಂದು ಪರೀಕ್ಷಿಸಲು ಬಳಸಿಕೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ಚಂಪತ್ ರೈ ತಿಳಿಸಿದರು.
ದೇವಾಲಯವನ್ನು ನಿರ್ಮಿಸಲು ಸುಮಾರು 10,000 ತಾಮ್ರದ ಸಲಾಕೆಗಳು ಬೇಕಾಗುತ್ತವೆ. ಜನರು ನಿರ್ಮಾಣ ಪ್ರಕ್ರಿಯೆಯ ಭಾಗವಾಗಲು ಬಯಸುವ ಕಾರಣ, ಅವರು ತಾಮ್ರವನ್ನು ದಾನ ಮಾಡುವ ಮೂಲಕ ಮಾಡಬಹುದು ಎಂದು ರೈ ಹೇಳಿದರು.
ಕಲ್ಲುಗಳನ್ನು ಮಾತ್ರ ಬಳಸಿದರೆ ಮಂದಿರ ಗಾಳಿ, ಬೆಳಕು, ನೀರಿಗೆ ಹಾಳಾಗುವುದಿಲ್ಲ ಮತ್ತು ಸಾವಿರಕ್ಕೂ ಹೆಚ್ಚು ವರ್ಷ ಕಾಲ ಬಾಳುತ್ತದೆ ಎಂದು ಚಂಪತ್ ರೈ ಹೇಳುತ್ತಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…