Featured

ಕಳಸ : ಪಿಕಪ್ ಸಮೇತ ನದಿಗೆ ಬಿದ್ದು ಪುತ್ರ ನಾಪತ್ತೆ: ಮನನೊಂದ ತಾಯಿ ಆತ್ಮಹತ್ಯೆ – vishwanews24

ಕಳಸ : ಪಿಕಪ್ ಸಮೇತ ನದಿಗೆ ಬಿದ್ದು ಪುತ್ರ ನಾಪತ್ತೆ: ಮನನೊಂದ ತಾಯಿ ಆತ್ಮಹತ್ಯೆ

ಚಿಕ್ಕಮಗಳೂರು: ಮಗನ ಸಾವಿನಿಂದ ಮನನೊಂದ ತಾಯಿ, ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು  ಜಿಲ್ಲೆಯ ಕಳಸ  ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದ.

ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ  ಉರುಳಿ ಬಿದ್ದು ಶಮಂತ್ ಸಾವನ್ನಪ್ಪಿದ್ದ. ಶಮಂತ್ ಪಿಕಪ್‌ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಗುರುವಾರ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಈ ಅವಘಡ ಸಂಭವಿಸಿತ್ತು.

ನಿರಂತರ ಮಳೆ ಸುರಿಯುತ್ತಿದ್ದರಿಂದ ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು. ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆಯ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

10 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

10 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

10 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

10 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago