Featured

ಕಳೆದ ಕೆಲ ವರ್ಷಗಳಿಂದ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಗಾಂಧೀಜಿ ಆತ್ಮ ನೊಂದಿರಬಹುದು: ಸೋನಿಯಾ ಗಾಂಧಿ -Vishwanews24

ನವದೆಹಲಿ: ಮಹಾತ್ಮಾ ಗಾಂಧಿ ಅವರ 150ನೇ ಜನ್ಮದಿನಾಚರಣೆ ಸಂದರ್ಭದಲ್ಲಿಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಳೆದ ಕೆಲ ವರ್ಷಗಳಲ್ಲಿ ದೇಶದಲ್ಲಿ ನಡೆದಿರುವ ಘಟನೆಗಳಿಂದ ಗಾಂಧೀಜಿ ಅವರ ಆತ್ಮ ನೊಂದಿರಬಹುದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನವದೆಹಲಿಯ ರಾಜಘಾಟ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಗಾಂಧಿ ಸ್ವದೇಶ್ ಯಾತ್ರೆ’ಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಮತ್ತು ಗಾಂಧೀಜಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಆದರೆ, ಕೆಲವರಿಗೆ ಆರ್ ಎಸ್ ಎಸ್ ಬೇಕು, ಗಾಂಧೀಜಿ ಬೇಡ. ಇಂತಹ ಜನರು ಭಾರತ ವೈವಿದ್ಯಮಯ ಸಂಸ್ಕೃತಿಯನ್ನೊಳಗೊಂಡ ಸಮಾಜ ಹಾಗೂ ಗಾಂಧೀಜಿ ತತ್ವಗಳನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಕಿಡಿಕಾರಿದರು.

ತಪ್ಪು ರಾಜಕೀಯದಾಟದಲ್ಲಿ ತೊಡಗಿರುವರು ಮಹಾತ್ಮಾ ಗಾಂಧಿ ಅವರ ಸಿದ್ಧಾಂತಕ್ಕೆ ಗೌರವ ತೋರುವುದಿಲ್ಲ. ಗಾಂಧೀಜಿ ಎಂದಿಗೂ ಸತ್ಯಕ್ಕೆ ಬದ್ಧರಾಗಿದ್ದರು. ಆದರೆ, ಈಗಿನ ರಾಜಕಾರಣಿಗಳು ತಮ್ಮನ್ನು ಮಹಾತ್ಮಾ ಗಾಂಧೀಜಿಯ ಸಿದ್ಧಾಂತಗಳಿಗಿಂತ ದೊಡ್ಡವರೆಂದು ಭಾವಿಸುತ್ತಾರೆ ಎಂದರು.

ಕಳೆದ ಕೆಲ ವರ್ಷಗಳಿಂದ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಗಾಂಧೀಜಿ ಆತ್ಮ ನೊಂದಿರಬಹುದು. ಇಂದು ರೈತರು ಕಡುಬಡವರಾಗಿದ್ದು, ಯುವಕರು ಉದ್ಯೋಗಕ್ಕಾಗಿ ಅಲೆದಾಡುವಂತಾಗಿರುವುದು ದುರದೃಷ್ಟಕರ ಪರಿಸ್ಥಿತಿ ಎಂದರು.  ಗಾಂಧೀಜಿ ಅವರ ಹೆಸರನ್ನು ಉಲ್ಲೇಖಿಸುವುದು ಸುಲಭ. ಆದರೆ,ಅವರ ಸಿದ್ಧಾಂತಗಳನ್ನು ಪಾಲಿಸುವುದು ಕಷ್ಟ ಎಂದು ವ್ಯಂಗ್ಯವಾಡಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

8 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

8 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

8 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

9 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

9 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

9 hours ago