ಉಡುಪಿ,: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್. ಯಡಿಯೂರಪ್ಪ ಬಿ.ಜೆ.ಪಿ ಜಿಲ್ಲಾ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಯವರ ಮನೆಗೆ ಭೇಟಿ ನೀಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ಜಿಲ್ಲೆಯಲ್ಲಿ ಆಗಿರುವ ಲೋಕಸಭಾ ಚುನಾವಣೆಯ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಮುಂದಿನ 10 ದಿನಗಳಲ್ಲಿ ಪ್ರಚಾರಕ್ಕೆ ಇನ್ನಷ್ಟು ವೇಗ ಕೊಡಬೇಕೆಂದು ಪಕ್ಷದ ಪದಾಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಅಂತರದಿಂದ ಶೋಭಾ ಕರಂದ್ಲಾಜೆಯವರು ಗೆಲ್ಲಲಿದ್ದಾರೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವಿ. ಸುನಿಲ್ ಕುಮಾರ್, ಕೆ. ರಘುಪತಿ ಭಟ್, ಬಿಜೆಪಿ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುಯಿಲಾಡಿ ಸುರೇಶ್ ನಾಯಕ್, ಯಶ್‍ಪಾಲ್ ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಬಿ. ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಕಿರಣ್ ಕುಮಾರ್, ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…