Featured

ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿ ಸರ್ಕಾರ ನಮ್ಮ ರಾಜ್ಯಕ್ಕೆ ದೊಡ್ಡ ಕಳಂಕ ತಂದಿದೆ : ಡಿ.ಕೆ ಶಿ – VIshwanews24

ಕರ್ನಾಟಕ ರಾಜ್ಯದ ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ..

ಬೆಳಗಾವಿ: ಕರ್ನಾಟಕ ರಾಜ್ಯದ ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ ಎಂದು ಕಾಂಗ್ರೆಸ್  ಪ್ರಜಾಧ್ವನಿ ಬಸ್‌ಯಾತ್ರೆ ಚಾಲನೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌  ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು ಬ್ರಿಟಿಷ್‌ರನ್ನು ಓಡಿಸಲು ಈ ನಾಡಿನಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸ್ವೀಕರಿಸಿ ಹೋರಾಡಿದ್ದರು. ಅದಾದ ಮೇಲೆ ಪ್ರಜಾಪ್ರಭುತ್ವ ಬಂದು ಅಭಿವೃದ್ಧಿಶೀಲ ರಾಷ್ಟ್ರವಾಗಿದೆ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿ ಸರ್ಕಾರ ನಮ್ಮ ರಾಜ್ಯಕ್ಕೆ ದೊಡ್ಡ ಕಳಂಕ ತಂದಿದೆ. ಆ ಕಳಂಕ ನಿರ್ಮೂಲನೆ ಮಾಡಲು ಪ್ರಜೆಗಳ ಧ್ವನಿ ತಿಳಿಸಲು ಹೊರಟಿದ್ದೇವೆ ಎಂದು ತಿಳಿಸಿದರು.

ಐತಿಹಾಸಿಕವಾದ ಈ ಭೂಮಿಯಿಂದ ಪ್ರಜಾಧ್ವನಿ ಗ್ಯಾರಂಟಿ ಯಾತ್ರೆ ಆರಂಭವಾಗಿದೆ. ಈ ತಿಂಗಳು ಜಿಲ್ಲಾ ಕೇಂದ್ರಗಳನ್ನು ಮುಗಿಸಿ ಬಳಿಕ ಕ್ಷೇತ್ರವಾರು ಸಂಚಾರ ಮಾಡುತ್ತೇವೆ. ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸಂಚಾರ ಮಾಡುತ್ತೇವೆ. ಆಯಾ ಭಾಗಕ್ಕೆ ಹೋದಾಗ ಆಯಾ ನಾಯಕರು ಬರುತ್ತಾರೆ. 20 ಜಿಲ್ಲೆಗಳಲ್ಲಿ ನಾನು, ಸಿದ್ದರಾಮಯ್ಯ, ಹೆಚ್.ಕೆ.ಪಾಟೀಲ್ ಸೇರಿ ಹಿರಿಯ ನಾಯಕರು ಸಂಚರಿಸಿಸುತ್ತೇವೆ ಎಂದರು.

 

ಹೊಸಬರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಖಂಡಿತ ಹೊಸಬರಿಗೆ ಅವಕಾಶ ಕೊಡುತ್ತೇವೆ. ನವ ಕರ್ನಾಟಕಕ್ಕೆ ಕಾಂಗ್ರೆಸ್ ಸಂಕಲ್ಪ ಮಾಡುತ್ತಿದೆ. ಪಂಚಮಸಾಲಿ ಮೀಸಲಾತಿ ಬಗ್ಗೆ ಕೂಡಲಸಂಗಮ ಸ್ವಾಮೀಜಿ ಚೆನ್ನಾಗಿ ವಿಶ್ಲೇಷಿಸಿದ್ದಾರೆ. ತುಪ್ಪವನ್ನು ತಲೆ ಮೇಲೆ ಇಟ್ಟಿದ್ದಾರೆ ಎಂದು ಚೆನ್ನಾಗಿ ವಿಶ್ಲೇಷಣೆ ಮಾಡಿದ್ದಾರೆ. ಎಲ್ಲಾ ವರ್ಗಗಳನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

20 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

20 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

21 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

21 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

21 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

22 hours ago