ಕಲಬುರಗಿ: ಇಂದಿನ ದಿನಗಳಲ್ಲಿ ಹಬ್ಬಗಳನ್ನೂ ಪೊಲೀಸರ ಬಂದೋಬಸ್ತ್‌ನಲ್ಲಿ ಆಚರಿಸಬೇಕಾದ ಸ್ಥಿತಿ ಬಂದಿರುವುದು ದುರ್ದೈವ. ಕಳೆದ 10 ವರ್ಷಗಳಿಂದ ಇಂತಹ ಪರಿಸ್ಥಿತಿ ಬಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಎಲ್ಲಾ ಧರ್ಮಗಳಲ್ಲೂ ಶಾಂತಿ ಕದಡುವವರು ಕೆಲವರು ಇರ್ತಾರೆ. ಕೆಲವರು ಅವರದ್ದೇ ಧರ್ಮ ಶ್ರೇಷ್ಠ ಅಂತಾ ಭಾವಿಸುತ್ತಾರೆ ಇದು ದುರ್ದೈವ. ನಾನು ಅದಮಾರ ಮಠದ ಶಾಲೆಯಲ್ಲಿ ಓದಿದ್ದೇನೆ. ಆಗ ನಮಗೆ ರಂಜಾನ್, ಗಣೇಶ್ ಹಬ್ಬ, ಕ್ರಿಸ್ಮಸ್, ರಾಮನವಮಿಗೆ ರಜೆ ಸಿಗ್ತಿತ್ತು. ರಂಜಾನ್, ರಾಮನವಮಿ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದರು ಎಂದು ಸ್ಮರಿಸಿದ್ದಾರೆ.
ಈ ಹಿಂದೆ ರಂಜಾನ್ ಬಂದ್ರೆ ನಾವು ಅವರ ಮನೆಗೆ ಹೋಗಿ ಬಿರಿಯಾನಿ ತಿಂದು ಬರ್ತಿದ್ವಿ, ಕ್ರಿಸ್ಮಸ್‌ಗೆ ಹೋಗಿ ಕೇಕ್ ತಿನ್ನುತ್ತಿದ್ವಿ. ಯುಗಾದಿ ಬಂದಾಗ ಅವರು ನಮ್ಮ ಮನೆಗೆ ಬಂದು ಹೋಳಿಗೆ ಊಟ ಮಾಡ್ತಿದ್ದರು. ಆದ್ರೆ ಈಗ ಎಲ್ಲ ಹಬ್ಬಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಣೆ ಮಾಡಬೇಕಿದೆ. 144 ಸೆಕ್ಷನ್ ವಿಧಿಸಿ ಹಬ್ಬ ಆಚರಣೆ ಮಾಡಬೇಕಾದಂತಹ ಪರಿಸ್ಥಿತಿ ಬಂದಿದೆ. ಇದು ಯಾರಿಂದ ಮತ್ತು ಯಾಕೆ ಆಗಿದೆ ಅನ್ನೋದನ್ನ ಯೋಚಿಸಬೇಕು ಎಂದು ಸಲಹೆ ನೀಡಿದ್ದಾರೆ.
ಕಳೆದ 10 ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಹಬ್ಬಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಿಸಬೇಕಿದೆ. ಯಾರೋ ನಾಲ್ಕು ಜನ ಬಂದು ನಮ್ಮ ಧರ್ಮ ಶ್ರೇಷ್ಠ ಅಂತ ಹೇಳುವುದರಿಂದ ಪೊಲೀಸರು ಎಲ್ಲದಕ್ಕೂ ಭದ್ರತೆ ನೀಡಬೇಕಿದೆ. ಇದು ದುರ್ದೈವದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…