ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಅನೇಕ ಕಡೆ ಪ್ರವಾಹದ ಭೀತಿ ಉಂಟಾಗಿದೆ. ಕೊಡಗು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭೂಕುಸಿತದ ಭೀತಿ ಉಂಟಾಗಿದ್ದು ಈಗಾಗಲೇ ಹಲವೆಡೆ ಮನೆಗು ಉರುಳಿ ಜನರು ಅತಂತ್ರಗೊಂಡಿದ್ದಾರೆ.
ಈ ಮಧ್ಯೆ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೂಡಲೇ ಎಚ್ಚೆತ್ತು ಜನರ ರಕ್ಷಣೆಯಲ್ಲಿ ತೊಡಗುವಂತೆ ಸಲಹೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಇನ್ನೊಂದು ಟ್ವೀಟ್‌ನಲ್ಲಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದಿರುವ ಅವರು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ..
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…