ಚನ್ನರಾಯಪಟ್ಟಣ: ಕಸಾಯಿಖಾನೆಗೆ ಸಾಗಿಸುತ್ತಿದ್ದ 44 ಎಳೆಯ ಕರುಗಳನ್ನು ಪ್ರಾಣಿ ದಯಾ ಸಂಘದ ಸದಸ್ಯರು ರಕ್ಷಿಸಿದ್ದಾರೆ. ಚನ್ನರಾಯಪಟ್ಟಣದ ಕಡೆಯಿಂದ ಪಟ್ಟಣದ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದ ಲಾರಿಯನ್ನು ಸಂಘದ ಸದಸ್ಯರು ತಪಾಸಣೆ ಮಾಡಿದಾಗ 44 ಹಸುವಿನ ಕರುಗಳು ಪತ್ತೆಯಾಗಿದ್ದು, ಇವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿರುವುದಾಗಿ ತಿಳಿದು ಬಂದಿದೆ.
ತಾಲೂಕಿನಲ್ಲಿ ಹೈನುಗಾರಿಕೆ ಮಾಡುತ್ತಿರುವವರು ತಮ್ಮ ಸೀಮೆಹಸುಗಳಿಗೆ ಗಂಡು ಕರುಗಳು ಜನಿಸಿದರೆ ತಕ್ಷಣ ಕಡಿಮೆ ಹಣಕ್ಕೆ ಕಸಾಯಿಖಾನೆಯವರಿಗೆ ಮಾರಾಟ ಮಾಡಿ ಬಿಡುತ್ತಾರೆ. ಕರುಗಳು ಹುಟ್ಟಿದ ಒಂದು ದಿನಗಳಿಂದ ಐದು ದಿನಗಳ ಕರುಗಳನ್ನು ತುಂಬಿಕೊಂಡ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಸಂಗ್ರಹ ಮಾಡಿದ್ದ ಪ್ರಾಣಿ ದಯಾ ಸಂಘದ ಗೌತಮ್ ಎಂಬುವವರು ಪಟ್ಟಣದ ಅಂಚೆ ಕಚೇರಿ ಮುಂಭಾಗದಲ್ಲಿ ವಾಹನವನ್ನು ತಡೆದು ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಕರುಗಳನ್ನು ತುಂಬಿದ್ದ ವಾಹನ ಮತ್ತು ಚಾಲಕ ವಿಶ್ವ ಮತ್ತು ಸಹಾಯಕ ಯೋಗೇಶ್ ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಪುಟ್ಟ ಕರುಗಳು ನಿತ್ರಾಣಗೊಂಡು ಕುಸಿದು ಬಿದ್ದು ನರಳುವುದನ್ನು ಕಂಡು ಮರುಗಿದ ಪಟ್ಟಣ ಪೊಲೀಸ್ ಠಾಣೆ ಉಪ ನಿರೀಕ್ಷಕ ಎಚ್.ಎಸ್.ವೆಂಕಟೇಶ್ ಡೈರಿಯಿಂದ ಹಾಲನ್ನು ತಂದು ಬಾಟಲ್‍ನಿಂದ ಮಕ್ಕಳಿಗೆ ಹಾಲು ಕುಡಿಸುವ ರೀತಿ ಸಂತೈಸಿದರು. ಜೊತೆಗೆ ಸಣ್ಣಪುಟ್ಟ ಗಾಯಗೊಂಡಿದ್ದ ಕರುಗಳಿಗೆ ಔಷಧಿ ನೀಡಿ ಉಪಚಾರ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…