Featured

ಕಸಾಯಿಖಾನೆ ಅಭಿವೃದ್ಧಿ ವಿವಾದ: ಸಚಿವ ಖಾದರ್‌ ಬೆಂಬಲಕ್ಕೆ ನಿಂತ ಜಿಲ್ಲಾ ಜೆಡಿಎಸ್

ಮಂಗಳೂರು,: ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕುದ್ರೋಳಿಯ ಕಸಾಯಿಖಾನೆಯ ಅಭಿವೃದ್ಧಿ ಸೇರ್ಪಡೆಯ ವಿಚಾರವು ವಿವಾದಗೊಳ್ಳುತ್ತಿರುವ ಮಧ್ಯೆಯೇ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌ ಪರ ದ.ಕ. ಜಿಲ್ಲಾ ಜೆಡಿಎಸ್ ನಿಂತಿದೆ.

ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ, ಕಸಾಯಿಖಾನೆಯ ವಿಚಾರದಲ್ಲಿ ಸಚಿವ ಖಾದರ್ ಸಲಹೆಯನ್ನಷ್ಟೇ ನೀಡಿದ್ದಾರೆ. ಅವರು ಏಕಪಕ್ಷೀಯವಾಗಿ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕಸಾಯಿ ಖಾನೆಯ ಅಭಿವೃದ್ಧಿಗೆ 15 ಕೋ.ರೂ. ಬಿಡುಗಡೆಯೂ ಆಗಿಲ್ಲ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬಳಸಿ ಎಂದು ಅಧಿಕಾರಿಗಳ, ಜನಪ್ರತಿನಿಧಿಗಳ ಮಟ್ಟದಲ್ಲಿ ನಡೆದ ಸಭೆಯಲ್ಲಿ ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಿಜೆಪಿಯ ಜನಪ್ರತಿನಿಧಿಗಳೂ ಇದ್ದರು. ಆವಾಗ ಮೌನ ತಾಳಿದ್ದ ಬಿಜೆಪಿಗರು ಇದೀಗ ಚುನಾವಣೆಯ ದೃಷ್ಟಿಯಲ್ಲಿ ಖಾದರ್ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದರು.

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ ನೀಡುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತನ್ನ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಯಾವುದೇ ಪಕ್ಷಪಾತ ಮಾಡುವುದಿಲ್ಲ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಅಲ್ಲದೆ ಕಸಾಯಿಖಾನೆಯ ನೈರ್ಮಲ್ಯದ ದೃಷ್ಟಿಯಿಂದ ಅಭಿವೃದ್ಧಿಪಡಿಸುವ ಯೋಜನೆಗೆ ಖಾದರ್ ಮುಂದಾಗಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಮುಹಮ್ಮದ್ ಕುಂಞಿ ನುಡಿದರು.

ಕೊಣಾಜೆ ಸಮೀಪದ ಪಜೀರ್‌ನ ಕಾರ್ತಿಕ್‌ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಗೆ ಬೆಂಕಿ ಹಚ್ಚುವುದಾಗಿ ಹೇಳಿಕೊಂಡಿದ್ದ ಸಂಸದ ನಳಿನ್ ಇದೀಗ ‘ಕಸಾಯಿಖಾನೆ ಮತ್ತು ಖಾದರ್’ ವಿಚಾರವನ್ನು ಮುಂದಿಟ್ಟು ಜನರ ದಾರಿ ತಪ್ಪಿಸುತ್ತಿದ್ದಾರೆ. ಭಾವನಾತ್ಮಕವಾಗಿ ವಿಭಜಿಸುವ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಪ್ರಚೋದನಕಾರಿ ಮಾತುಗಳ ಮೂಲಕ ಜಿಲ್ಲೆಯ ಸ್ವಾಸ್ಥ ಕೆಡಹುವ ಬದಲು ಜಿಲ್ಲೆಯ ಅಭಿವೃದ್ಧಿಗೆ ಸೂಕ್ತ ಸಲಹೆಗಳನ್ನು ನೀಡಲಿ ಎಂದು ಮುಹಮ್ಮದ್ ಕುಂಞಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ವಸಂತ ಪೂಜಾರಿ, ಎಂ.ಕೆ.ಖಾದರ್ ಮತ್ತಿತರರಿದ್ದರು.

 

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

11 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

11 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

11 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

12 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

13 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

13 hours ago