ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24
ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ
ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ ಕರ್ನಾಟಕದ 12 ಶಾಸಕರು ದೆಹಲಿಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ನಮಗೂ ಸಚಿವ ಸ್ಥಾನ ಕೊಡಿ ಎಂದು ಕಾಂಗ್ರೆಸ್‌ನ ಹಲವು ಹಿರಿಯ ಶಾಸಕರು ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಹೈಕಮಾಂಡ್ ನಾಯಕರ ಭೇಟಿಯಾಗಿ ಮನವಿ ಸಲ್ಲಿಸಲು ಪ್ರಯತ್ನಿಸಿದ್ದರು.
ಟಿ.ಬಿ.ಜಯಚಂದ್ರ, ಅಶೋಕ್ ಪಟ್ಟಣ್, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾರ‍್ಲಿ, ಬಸವರಾಜ್ ಶಿವಣ್ಣನವರ್, ಮಹಾಂತೇಶ್ ಕೌಜಲಗಿ, ಷಡಕ್ಷರಿ, ಯಶವಂತರಾಯಗೌಡ ಪಾಟೀಲ್, ಜಿಟಿ ಪಾಟೀಲ್ ಅವರು ದೆಹಲಿಯಲ್ಲಿ ಉಳಿದಿದ್ದಾರೆ.
ಇದನ್ನೂ ಓದಿ:
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24
ಇಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಸಂಪುಟ ಪುನಾರಚನೆಗೆ ಮನವಿ ಮಾಡಿದ್ದಾರೆ.
