ಕಾಂಗ್ರೆಸ್‌ನವರ ಮೇಲೆ ಮಾತ್ರ ಪ್ರಕರಣ ದಾಖಲು – ಡಿಜಿಪಿ ಪ್ರವೀಣ್ ಸೂದ್ ಅವರನ್ನು ಬಂಧಿಸುವಂತೆ ಡಿ.ಕೆ.ಶಿ ಆಗ್ರಹ – Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ಸರ್ಕಾರ ರಕ್ಷಿಸುತ್ತಿರುವ ಡಿಜಿಪಿ ಪ್ರವೀಣ್ ಸೂದ್ ಒಬ್ಬ ನಾಲಾಯಕ್..

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಅವರ ವಿರುದ್ಧ ಕ್ರಮ ಜರುಗಿಸುವುದು ಖಚಿತ..

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬಂಧಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರವೀಣ್ ಸೂದ್ ಅವರು ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಆದರೆ, ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ’ ಎಂದು ಡಿಕೆಶಿ ದೂರಿದ್ದಾರೆ.

‘ಡಿಜಿಪಿ ನಾಲಾಯಕ್ (ನಿಷ್ಪ್ರಯೋಜಕ). ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು’ ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ.

ರಾಜ್ಯ ಸಾರಿಗೆ ನೌಕರರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ :  ಶೇ.15 ರಷ್ಟು ವೇತನ ಹೆಚ್ಚಳ ಮಾಡಿ ಇಂದೇ ಅಧಿಕೃತ ಆದೇಶ – Vishwanews24

‘ಪ್ರವೀಣ್ ಸೂದ್ ಡಿಜಿಪಿಯಾಗಿ ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ. ಎಷ್ಟು ದಿನ ಅವರನ್ನೇ ಡಿಜಿಪಿ ಹುದ್ದೆಯಲ್ಲಿ ಇಟ್ಟುಕೊಂಡು ಪೂಜೆ ಮಾಡುತ್ತೀರಿ? ಕಾಂಗ್ರೆಸ್‌ನವರ ಮೇಲೆ ಮಾತ್ರ ಪ್ರಕರಣ ದಾಖಲಿಸುತ್ತಿದ್ದಾರೆ. ನಮ್ಮ ಮೇಲೆ 25ಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಅವರ ವಿರುದ್ಧ ಕ್ರಮ ಜರುಗಿಸುವುದು ಖಚಿತ’ ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು  ನಾವು ಹೊಂದಿದ್ದೇವೆ ಎಂದು ಡಿಕೆಶಿ ತಿಳಿಸಿದ್ದಾರೆ.

ಗೀಸರ್‌ ಗ್ಯಾಸ್ ಸೋರಿಕೆ: ಉಸಿರುಗಟ್ಟಿ ದಂಪತಿ ಮೃತ್ಯು – ಮಗು ಆಸ್ಪತ್ರೆಗೆ ದಾಖಲು – Vishwanews24

Leave a Reply