ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬಂಧಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರವೀಣ್ ಸೂದ್ ಅವರು ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಆದರೆ, ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ’ ಎಂದು ಡಿಕೆಶಿ ದೂರಿದ್ದಾರೆ.
‘ಡಿಜಿಪಿ ನಾಲಾಯಕ್ (ನಿಷ್ಪ್ರಯೋಜಕ). ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು’ ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ.
‘ಪ್ರವೀಣ್ ಸೂದ್ ಡಿಜಿಪಿಯಾಗಿ ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ. ಎಷ್ಟು ದಿನ ಅವರನ್ನೇ ಡಿಜಿಪಿ ಹುದ್ದೆಯಲ್ಲಿ ಇಟ್ಟುಕೊಂಡು ಪೂಜೆ ಮಾಡುತ್ತೀರಿ? ಕಾಂಗ್ರೆಸ್‌ನವರ ಮೇಲೆ ಮಾತ್ರ ಪ್ರಕರಣ ದಾಖಲಿಸುತ್ತಿದ್ದಾರೆ. ನಮ್ಮ ಮೇಲೆ 25ಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಅವರ ವಿರುದ್ಧ ಕ್ರಮ ಜರುಗಿಸುವುದು ಖಚಿತ’ ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಡಿಕೆಶಿ ತಿಳಿಸಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…