ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾರತ ಮತ್ತು ಪಾಕಿಸ್ತಾನವನ್ನು ಇಬ್ಬಾಗ ಮಾಡಿದ್ದೇ ಇಷ್ಟೆಲ್ಲಾ ಬೆಳವಣಿಗೆಗಳಿಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, “ಜಮ್ಮು-ಕಾಶ್ಮೀರ 370 ನೇ ವಿಧಿ ರದ್ದು ಮಾಡುವುದು; ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮಾಡುವುದು; ರಾಮಮಂದಿರ ನಿರ್ಮಾಣ ಮಾಡುವ ಭರವಸೆ ಪ್ರಣಾಳಿಯಲ್ಲಿ ನೀಡಿದ್ದೆವು. ಅಂತೆಯೀಗ ಮೂರು ವಿಚಾರಗಳನ್ನು ಅನುಷ್ಠಾನಗೊಳಿಸಿದ್ದೇವೆ ಎಂಬ ಹೆಮ್ಮ ನನಗಿದೆ” ಎಂದರು.
ಭಾರತ ಮತ್ತು ಪಾಕಿಸ್ತಾನವನ್ನು ಎರಡನ್ನಾಗಿ ವಿಭಜಿಸಿದ ಕಾಂಗ್ರೆಸ್ ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣವಾಗಿದೆ. ಭಾರತವನ್ನು ಜಾತ್ಯತೀತ ರಾಷ್ಟ್ರ ಎಂದು ಕರೆಯುತ್ತಿದ್ದರೆ, ಪಾಕಿಸ್ತಾನವನ್ನು ಇಸ್ಲಾಮಿಕ್ ರಾಷ್ಟ್ರ ಎನ್ನಲಾಗುತ್ತಿತ್ತು. ಆದರೂ, ಭಾರತದಲ್ಲಿ ಇಲ್ಲಿಯವರೆಗೂ ಅಲ್ಪಸಂಖ್ಯಾತ ಸಮುದಾಯದವರು ರಾಷ್ಟ್ರಪತಿ, ಮುಖ್ಯಮಂತ್ರಿ ಮತ್ತು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಲು ಅವಕಾಶ ನೀಡಿದ್ದೇವೆ. ಭಾರತ ಎಲ್ಲಾ ಧರ್ಮಗಳಿಗೂ ಆಶ್ರಯ ನೀಡಿದೆ ಎಂದರು.
ಹಾಗೆಯೇ ಕಳೆದ 6 ವರ್ಷದಿಂದ ರಾಜಕೀಯ ಮಾಡಲು ಕಾಂಗ್ರೆಸ್ಗೆ ಯಾವ ವಿಷಯಗಳು ಸಿಕ್ಕಿರಲಿಲ್ಲ. ಈಗ ಪೌರತ್ವ ಕಾಯ್ದೆ ವಿಚಾರವಾಗಿ ದೇಶದಲ್ಲಿ ಬೆಂಕಿ ಹೊತ್ತಿಸುವ ಕಾರ್ಯ ಕಾಂಗ್ರೆಸ್ಸಿಗರು ಮಾಡುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್ ಎಲ್ಲಾ ರೀತಿಯಲ್ಲೂ ದಿವಾಳಿಯಾಗಿದೆ. ಈ ದಿವಾಳಿತನ ಸರಿಪಡಿಸಿಕೊಳ್ಳಲು ಕಾಯ್ದೆಯನ್ನಿಟ್ಟುಕೊಂಡು ತಂತ್ರಗಾರಿಕೆ ನಡೆಸುತ್ತಿದೆ ಎಂದು ಟೀಕಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…