Featured

ಕಾಂಗ್ರೆಸ್​ ಭಾರತ ಮತ್ತು ಪಾಕಿಸ್ತಾನವನ್ನು ಇಬ್ಬಾಗ ಮಾಡಿದ್ದೇ ಇಷ್ಟೆಲ್ಲಾ ಬೆಳವಣಿಗೆಗಳಿಗೆ ಕಾರಣ : ನಳಿನ್​​ ಕುಮಾರ್​​​ ಕಟೀಲ್ -Vishwanews24

ಬೆಂಗಳೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಭಾರತ ಮತ್ತು ಪಾಕಿಸ್ತಾನವನ್ನು ಇಬ್ಬಾಗ ಮಾಡಿದ್ದೇ ಇಷ್ಟೆಲ್ಲಾ ಬೆಳವಣಿಗೆಗಳಿಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​​ ಕಟೀಲ್​​​​ ಹೇಳಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​​ ಕುಮಾರ್​​ ಕಟೀಲ್​​​, “ಜಮ್ಮು-ಕಾಶ್ಮೀರ 370 ನೇ ವಿಧಿ ರದ್ದು ಮಾಡುವುದು; ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮಾಡುವುದು; ರಾಮಮಂದಿರ ನಿರ್ಮಾಣ ಮಾಡುವ ಭರವಸೆ ಪ್ರಣಾಳಿಯಲ್ಲಿ ನೀಡಿದ್ದೆವು. ಅಂತೆಯೀಗ ಮೂರು ವಿಚಾರಗಳನ್ನು ಅನುಷ್ಠಾನಗೊಳಿಸಿದ್ದೇವೆ ಎಂಬ ಹೆಮ್ಮ ನನಗಿದೆ” ಎಂದರು.

ಭಾರತ ಮತ್ತು ಪಾಕಿಸ್ತಾನವನ್ನು ಎರಡನ್ನಾಗಿ ವಿಭಜಿಸಿದ ಕಾಂಗ್ರೆಸ್​​ ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣವಾಗಿದೆ. ಭಾರತವನ್ನು ಜಾತ್ಯತೀತ ರಾಷ್ಟ್ರ ಎಂದು ಕರೆಯುತ್ತಿದ್ದರೆ, ಪಾಕಿಸ್ತಾನವನ್ನು ಇಸ್ಲಾಮಿಕ್​​ ರಾಷ್ಟ್ರ ಎನ್ನಲಾಗುತ್ತಿತ್ತು. ಆದರೂ, ಭಾರತದಲ್ಲಿ ಇಲ್ಲಿಯವರೆಗೂ ಅಲ್ಪಸಂಖ್ಯಾತ ಸಮುದಾಯದವರು ರಾಷ್ಟ್ರಪತಿ, ಮುಖ್ಯಮಂತ್ರಿ ಮತ್ತು ಸುಪ್ರೀಂಕೋರ್ಟ್​​ ನ್ಯಾಯಮೂರ್ತಿಯಾಗಲು ಅವಕಾಶ ನೀಡಿದ್ದೇವೆ. ಭಾರತ ಎಲ್ಲಾ ಧರ್ಮಗಳಿಗೂ ಆಶ್ರಯ ನೀಡಿದೆ ಎಂದರು.

ಹಾಗೆಯೇ ಕಳೆದ 6 ವರ್ಷದಿಂದ ರಾಜಕೀಯ ಮಾಡಲು ಕಾಂಗ್ರೆಸ್​ಗೆ ಯಾವ ವಿಷಯಗಳು ಸಿಕ್ಕಿರಲಿಲ್ಲ. ಈಗ ಪೌರತ್ವ ಕಾಯ್ದೆ ವಿಚಾರವಾಗಿ ದೇಶದಲ್ಲಿ ಬೆಂಕಿ ಹೊತ್ತಿಸುವ ಕಾರ್ಯ ಕಾಂಗ್ರೆಸ್ಸಿಗರು​ ಮಾಡುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್​​ ಎಲ್ಲಾ ರೀತಿಯಲ್ಲೂ ದಿವಾಳಿಯಾಗಿದೆ. ಈ ದಿವಾಳಿತನ ಸರಿಪಡಿಸಿಕೊಳ್ಳಲು ಕಾಯ್ದೆಯನ್ನಿಟ್ಟುಕೊಂಡು ತಂತ್ರಗಾರಿಕೆ ನಡೆಸುತ್ತಿದೆ ಎಂದು ಟೀಕಿಸಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago