ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಲು ಕಾಂಗ್ರೆಸ್ಸಿಗರೇ ಕಾರಣ : ಪ್ರಜ್ವಲ್ ರೇವಣ್ಣ -Vishwanews24
ಹಾಸನ: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಉರುಳಲು ಕಾಂಗ್ರೆಸ್ಸಿಗರೇ ಕಾರಣ ಎಂದು ಪ್ರಜ್ವಲ್ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂತ್ರಿಯಾಗುವ ಬಯಕೆಯಲ್ಲಿ ಕೆಲವರು ಹಣ ಪಡೆದು ಸರ್ಕಾರ ಬೀಳಿಸಿದ್ದಾರೆ. ಆದರೆ, ಇದಕ್ಕೆ ನಮ್ಮ ತಂದೆಯನ್ನು ಹೊಣೆಯಾಗಿಸಲಾಗುತ್ತಿದೆ ಎಂದು ಸಂಸತ್ ಸದಸ್ಯ ಪ್ರಜ್ವಲ್ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋತಿ ತಾನು ಮೊಸರು ತಿಂದು ಮೇಕೆ ಮೂತಿಗೆ ಒರೆಸಿತು ಎಂಬಂತೆ ಸರ್ಕಾರದ ಪತನಕ್ಕೆ ನಮ್ಮ ತಂದೆಯ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಆದರೆ, ಸರ್ಕಾರವನ್ನು ಕೆಡವಿದ್ದ ಕಾಂಗ್ರೆಸ್ಸಿಗರು. ತಮ್ಮ ವೈಯಕ್ತಿಕ ಕಾರಣಕ್ಕಾಗಿ ಸರ್ಕಾರವನ್ನು ಬೀಳಿಸಿದ್ದಾರೆ ಎಂದು ಪುನರುಚ್ಚರಿಸಿದರು.
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಾಗ ಸುಳ್ಳು ಪ್ರಮಾಣಪತ್ರ ಸಲ್ಲಿಸಿರುವ ಕುರಿತು ತಮಗೆ ಇದುವರೆಗೂ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
