ಚನ್ನಪಟ್ಟಣ, : ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿ ಗುರುತಿಸಿಕೊಂಡಿದ್ದ ಜೆ.ಡಿ.ಎಸ್.ಗೆ ಮೈತ್ರಿ ಪಕ್ಷವಾದ ಕಾಂಗ್ರೆಸ್ ಪಕ್ಷವೇ ಭಾರಿ ಪೆಟ್ಟು ನೀಡಲಿದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭವಿಷ್ಯ ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ನೆಪ ಮಾತ್ರಕ್ಕೆ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್.ಮೈತ್ರಿ ಅಭ್ಯರ್ಥಿಯಾಗಿದ್ದು, ನಿಜವಾದ ಸತ್ಯ ಎಂದರೆ, ಈ ಚುನಾವಣೆಯಲ್ಲಿ ಜೆ.ಡಿ.ಎಸ್.ಚಿಹ್ನೆಯೇ ಮಾಯವಾಗಿದ್ದು, ಕಾಂಗ್ರೆಸ್ ಪರೋಕ್ಷವಾಗಿ ಜೆ.ಡಿ.ಎಸ್.ನಿರ್ನಾಮಕ್ಕೆ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಜೆ.ಡಿ.ಎಸ್.ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ ಎಂದರು.
ಒಟ್ಟಾರೆ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾಗಿರುವ ಜೆ.ಡಿ.ಎಸ್.ತನ್ನ ನೆಲೆಯನ್ನು ಕಳೆದುಕೊಳ್ಳುವ ಕಾಲ ದೂರವಿಲ್ಲಾ, ಜೆ.ಡಿ.ಎಸ್.ಪಕ್ಷವನ್ನು ನಿರ್ನಾಮ ಮಾಡಲು ದೂರದ ದೇಶದಿಂದ ಶತ್ರುಗಳು ಬರಬೇಕಾಗಿಲ್ಲ ಅವರ ಜೊತೆ ಇರುವ ಕಾಂಗ್ರೆಸ್ ಪಕ್ಷವೇ ಸಾಕು ಎಂದು ತಿಳಿಸಿದರು.
ಸಂಸದ ಡಿ.ಕೆ.ಸುರೇಶ್ ಒಂದು ದಿನ ಸಂಸತ್‍ನಲ್ಲಿ ರಾಜ್ಯದ ಜನರ ನೋವು ನಲಿವುಗಳ ಬಗ್ಗೆ ಮಾತನಾಡಿದ್ದಾರೆಯೇ ? ಇಲ್ಲಾ ಏಕೆಂದರೆ ಅವರಿಗೆ ಕನ್ನಡ ಬಿಟ್ಟರೆ ಹಿಂದಿ, ಇಂಗ್ಲೀಷ್ ಬಂದರೆ ತಾನೇ ಎಂದು ವ್ಯಂಗ್ಯವಾಡಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಬಿ.ಜೆ.ಪಿ.ಅಧ್ಯಕ್ಷ ಎಂ.ಎನ್.ಆನಂದಸ್ವಾಮಿ, ನಗರ ಘಟಕದ ಅಧ್ಯಕ್ಷ ವಿಷಕಂಠು, ಬಿ.ಜೆ.ಪಿ.ಮುಖಂಡರಾದ ರಾಂಪುರ ಮಲವೇಗೌಡ, ಸಿ.ಪಿ.ನಾಗೇಶ್, ರಾಮಚಂದ್ರ, ನಗರಸಭಾ ಸದಸ್ಯ ರಾಮಣ್ಣ, ಚಕ್ಕರೆ ರಾಮು ಹಾಗೂ ಹಲವಾರು ಮುಖಂಡರು ಹಾಜರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…