ಬಿಜೆಪಿ ಮಹಾನಗರ ಜಿಲ್ಲಾ ಘಟಕದ ವೈದ್ಯಕೀಯ ಪ್ರಕೋಷ್ಠವು ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ದೇಶ ಸ್ವಾತಂತ್ರ್ಯಗೊಂಡ ನಂತರ ಮೊದಲ ಪ್ರಧಾನಿಯಾದ ಕಾಂಗ್ರೆಸ್ಸಿನ ಜವಾಹರಲಾಲ್ ನೆಹರು ಅವರು ಕಾಶ್ಮೀರಕ್ಕೆ ಪ್ರತ್ಯೇಕವಾದ ಧ್ವಜ ಹಾಗೂ ಕಾನೂನು ಜಾರಿಗೊಳಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಶ್ಯಾಮಪ್ರಸಾದ್ ಮುಖರ್ಜಿ, ಭಾರತೀಯ ಜನ ಸಂಘ ಸ್ಥಾಪಿಸಿದರು. ದೇಶದಲ್ಲಿ ಒಂದೇ ರೀತಿಯ ಕಾನೂನು ಇರಬೇಕು ಹಾಗೂ ಒಂದೇ ಧ್ವಜ ಇರಬೇಕೆನ್ನುವುದು ಅವರ ಬಯಕೆಯಾಗಿತ್ತು ಎಂದು ಅಂಗಡಿ ಸ್ಮರಿಸಿದರು.
ಕಾಲಾನಂತರ 1980ರ ಏಪ್ರಿಲ್ 6ರಂದು ಭಾರತೀಯ ಜನಸಂಘವನ್ನು ಭಾರತೀಯ ಜನತಾ ಪಕ್ಷವಾಗಿ (ಬಿಜೆಪಿ) ಪರಿವರ್ತಿಸಲಾಯಿತು. ಅಟಲ್ ಬಿಹಾರಿ ವಾಜಪೇಯಿ ಮೊದಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. 1984ರಲ್ಲಿ ಇಬ್ಬರು ಸಂಸದರನ್ನು ಹೊಂದಿದ್ದ ಬಿಜೆಪಿ ಇಂದು ಕೇಂದ್ರದಲ್ಲಿ ಸರ್ಕಾರ ರಚಿಸಿದೆ ಎಂದು ಪ್ರಶಂಶಿಸಿದರು.
ರಾಜಕೀಯವೆಂದರೆ ನಾಲ್ಕು ಜನರನ್ನು ಕಟ್ಟಿಕೊಂಡು ಓಡಾಡುವುದಲ್ಲ. ಬಡವರು, ದೀನ ದಲಿತರಿಗೆ ಸಹಾಯ ಮಾಡುವುದು. ಬಡವರ ಕಣ್ಣೀರು ಒರೆಸುವುದು. ದೇಶದ ಅಖಂಡತೆ ರಕ್ಷಿಸುವುದು ಬಿಜೆಪಿಯ ಸಿದ್ಧಾಂತವಾಗಿದೆ. ಪಕ್ಷದ ಸಿದ್ಧಾಂತವನ್ನು ಯುವಕರು ತಮ್ಮ ಕುಟುಂಬದ ಸದಸ್ಯರಿಗೆ ತಿಳಿಸಬೇಕು ಎಂದು ಕೋರಿದರು.
ಭತ್ಯೆ ಪಡೆಯಲ್ಲ: ‘ಕಾಂಗ್ರೆಸ್ ಜನಪರವಾಗಿಲ್ಲ. ದೇಶದ ಅಭಿವೃದ್ಧಿ ಪರವಾಗಿಲ್ಲ. ದೇಶದ ಸ್ಥಿತಿಗತಿ ಬಗ್ಗೆ ಚರ್ಚಿಸಲು ಸಂಸತ್ ಕಲಾಪ ನಡೆಸಲಾಗುತ್ತದೆ. ಆದರೆ, ಈ ಸಲ ಕಾಂಗ್ರೆಸ್ ಕಲಾಪ ನಡೆಸಲು ಬಿಡಲಿಲ್ಲ. ಪ್ರತಿದಿನ ಗದ್ದಲ ಎಬ್ಬಿಸಿ, ಕಲಾಪ ನಡೆಯದಂತೆ ನೋಡಿಕೊಂಡಿತು. ಕಲಾಪ ನಡೆಯದೇ ಇರುವುದರಿಂದ ನಾವು ಬಿಜೆಪಿಯ ಸಂಸದರು 23 ದಿನಗಳ ಭತ್ಯೆ ಪಡೆಯದಿರಲು ನಿರ್ಧರಿಸಿದ್ದೇವೆ’ ಎಂದು ಹೇಳಿದರು.
ಪಕ್ಷದ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯೆ ಉಜ್ವಲಾ ಬಡವನಾಚೆ ಮಾತನಾಡಿ, ‘ಕಾಂಗ್ರೆಸ್ ಪಕ್ಷದ ಮುಸ್ಲಿಂ ತುಷ್ಟೀಕರಣ ವಿರೋಧಿಸಿ ಶ್ಯಾಮಪ್ರಸಾದ್ ಮುಖರ್ಜಿ ಅವರು ಭಾರತೀಯ ಜನಸಂಘ ಸ್ಥಾಪಿಸಿದ್ದರು. ದೇಶದ ಎಲ್ಲ ಜಾತಿ, ಧರ್ಮದವರನ್ನು ಒಂದೇ ಸಮಾನವಾಗಿ ಪರಿಗಣಿಸಿದ್ದರು’ ಎಂದು ನುಡಿದರು.
‘ಇಂದು ಬಿಜೆಪಿ ದೇಶದಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಒಳಗೊಂಡಿರುವ ಪಕ್ಷವಾಗಿದೆ. 12 ಕೋಟಿಗಿಂತಲೂ ಹೆಚ್ಚು ಜನರು ಸದಸ್ಯತ್ವ ಪಡೆದಿದ್ದಾರೆ. ಪ್ರಸ್ತುತ ದೇಶದ ಹಲವು ರಾಜ್ಯಗಳಲ್ಲಿ ಬಿಜೆಪಿಯ ಕಮಲ ಅರಳಿದ್ದು, ರಾಜ್ಯದಲ್ಲಿ ಮೇ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ. ಈ ಮೂಲಕ ಕಾಂಗ್ರೆಸ್ ಮುಕ್ತ ಕರ್ನಾಟಕ ಆಗಲಿದೆ’ ಎಂದು ಹೇಳಿದರು.
ಪಕ್ಷದ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ.ರವಿ ಪಾಟೀಲ, ಮುಖಂಡರಾದ ಗೂಳಪ್ಪ ಹೊಸಮನಿ, ಬಸವರಾಜ ರೊಟ್ಟಿ ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…