ಹೊಸದಿಲ್ಲಿ : ಸೋನಿಯಾ ಗಾಂಧಿ ಅವರಿಂದು ಬುಧವಾರ ಕಾಂಗ್ರೆಸ್ ಸಂಸದೀಯ ಪಕ್ಷದ ಮಹಾ ಸಭೆಯಲ್ಲಿ ಮಾತನಾಡುತ್ತಾ, ‘ಆಳುವ ಮೋದಿ ಸರಕಾರದ ಆಡಳಿತ ತತ್ವವೇನೆಂದರೆ ಬಲಿಷ್ಠನೆಂದು ತೋರ್ಪಡಿಸಿಕೊಳ್ಳುವುದು, ಮಾತಿನ ಅರಮನೆ ಕಟ್ಟುವುದು ಮತ್ತು ಎದುರಾಳಿಗಳಿಗೆ ಬೆದರಿಕೆ ಒಡ್ಡುವುದೇ ಆಗಿದೆ’ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ವಿರೋಧಿಗಳನ್ನು ಪೂರ್ಣ ಶಕ್ತಿಯೊಂದಿಗೆ ಹಣಿಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ಸೋನಿಯಾ ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷಕ್ಕೆ ಹೊಸ ಶಕ್ತಿ, ಹುಮ್ಮಸ್ಸನ್ನು ತುಂಬಿದ್ದಾರೆ; ಅನುಭವ ಮತ್ತು ಯುವ ಶಕ್ತಿಯನ್ನು ಒಗ್ಗೂಡಿಸಿ ಪಕ್ಷವನ್ನು ಪುನರ್ ಸಂಘಟಿಸಿದ್ದಾರೆ ಎಂದು ಹೇಳಿದ ಸೋನಿಯಾ, ರಾಹುಲ್ ಅವರ ಸಂಘಟನಾ ಚಾತುರ್ಯವನ್ನು ಪ್ರಶಂಸಿಸಿದರು.
ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ನಾವು ಸಾಧಿಸಿರುವ ಗೆಲುವಿನ ಬಲ, ವಿಶ್ವಾಸದೊಂದಿಗೆ ನಾವು ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ಮುಂದಾಗುತ್ತಿದ್ದೇವೆ; ಮೂರು ರಾಜ್ಯಗಳನ್ನು ಜಯಿಸಿರುವ ನಮ್ಮಲ್ಲೀಗ ಹೊಸ ಭರವಸೆ, ಹೊಸ ವಿಶ್ವಾಸ ತುಂಬಿಕೊಂಡಿದೆ ಎಂದು ಹೇಳಿದರು.
ಕಾಂಗ್ರೆಸ್ ಸಂಸದೀಯ ಪಕ್ಷದ ಮಹಾ ಸಭೆಯಲ್ಲಿ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್‌ಸಿಂಗ್, ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಗುಲಾಂ ನಬೀ ಆಜಾದ್ ಮತ್ತು ಇತರ ಪ್ರಮುಖ ಪಾಲ್ಗೊಂಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…