ಹೈದರಾಬಾದ್: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ವಿವಿಧ ರಾಜ್ಯಗಳ ಕಾಂಗ್ರೆಸ ಘಟಕಗಳಲ್ಲಿ ಬಂಡಾಯದ ಬೆಂಕಿ ಭುಗಿಲೆದ್ದಿರುವಾಗ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಷ್ಟ್ರಾಧ್ಯಕ್ಷ ಹುದ್ದೆ ತೊರೆಯುವುದು ಸರಿಯಲ್ಲ ಎಂದು ಪಕ್ಷದ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಸಲಹೆ ನೀಡಿದ್ದಾರೆ. ಅಲ್ಲದೆ ಒಂದು ವೇಳೆ ರಾಜೀನಾಮೆ ನೀಡುವುದೇ ಆದಲ್ಲಿಪರ್ಯಾಯ ವ್ಯವಸ್ಥೆ ಮಾಡುವವರೆಗೂ ರಾಹುಲ್ ಹುದ್ದೆಯಲ್ಲಿ ಮುಂದುವರೆಯಬೇಕು ಎಂದು ಒತ್ತಾಯಿಸಿದ್ದಾರೆ.
ಪಂಜಾಬ್, ಮಹಾರಾಷ್ಟ್ರ, ರಾಜಸ್ಥಾನ, ತೆಲಂಗಾಣದ ಕಾಂಗ್ರೆಸ್ ಘಟಕದಲ್ಲಿನ ಬಂಡಾಯದ ಹಿನ್ನೆಲೆಯಲ್ಲಿ ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ವೀರಪ್ಪ ಮೊಯ್ಲಿ, ‘ನಾಯಕತ್ವ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳದೇ ಇದ್ದಾಗ, ಇಂಥ ಸಂಗತಿಗಳು ನಡೆಯುತ್ತವೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಆದ ಹಿನ್ನಡೆಯಿಂದ ಕಾಂಗ್ರೆಸ್ ನಿರಾಶೆಗೊಳ್ಳಬಾರದು.
ಮುಂದಿನ ದಿನಗಳಲ್ಲಿ ಖಂಡಿತಾ ಪಕ್ಷ ಪುಟಿದೇಳಲಿದೆ. ಇಂಥಾ ಒಂದು ಆಶಾವಾದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಂದ ಹಿಡಿದು ಮೇಲಿನ ಹಂತದ ನಾಯಕರಲ್ಲಿ ಇರಬೇಕು. ಪಂಜಾಬ್, ರಾಜಸ್ಥಾನದಲ್ಲಿನ ಕಾಂಗ್ರೆಸ್ ಘಟಕಗಳಲ್ಲಿ ಬಂಡಾಯದ ಬೆಂಕಿ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಧ್ಯಪ್ರವೇಶಿಸಬೇಕು. ಭಿನ್ನಮತ ಶಮನಗೊಳಿಸಬೇಕು. ತಕ್ಷಣವೇ ರಾಜೀನಾಮೆ ಹಿಂಪಡೆಯಬೇಕು ಎಂದು ಸಲಹೆ ಮಾಡಿದ್ದಾರೆ.
ರಾಜೀನಾಮೆ ನೀಡಲು ರಾಹುಲ್ ಅವರಿಗೆ ಇದು ಸೂಕ್ತ ಸಮಯವಲ್ಲ. ಪರಿಸ್ಥಿತಿಯನ್ನು ನಿಭಾಯಿಸಲು ಪರ್ಯಾಯ ವ್ಯವಸ್ಥೆ ಮಾಡುವವರೆಗೂ ರಾಹುಲ್ ಅವರು ಹುದ್ದೆ ತೊರೆಯಬಾರದು. ರಾಹುಲ್ ಅವರು ತಕ್ಷಣವೇ ರಾಜೀನಾಮೆ ಹಿಂಪಡೆಯಬೇಕು. ಅಧಿಕಾರ ವಹಿಸಿಕೊಂಡು, ಶಿಸ್ತು ಜಾರಿಗೊಳಿಸಿ, ಸಮಯ ವ್ಯರ್ಥ ಮಾಡದೇ ಪಕ್ಷ ಪುನಶ್ಚೇತನಗೊಳಿಸಬೇಕು. ವಿಶ್ವಾಸ, ಕೆಚ್ಚು ತುಂಬಬೇಕು ಎಂದು ತಿಳಿಸಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…