Featured

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ರಾಷ್ಟ್ರಾಧ್ಯಕ್ಷ ಹುದ್ದೆ ತೊರೆಯುವುದು ಸರಿಯಲ್ಲ : ವೀರಪ್ಪ ಮೊಯ್ಲಿ -Vishwanews24

ಹೈದರಾಬಾದ್‌: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ವಿವಿಧ ರಾಜ್ಯಗಳ ಕಾಂಗ್ರೆಸ ಘಟಕಗಳಲ್ಲಿ ಬಂಡಾಯದ ಬೆಂಕಿ ಭುಗಿಲೆದ್ದಿರುವಾಗ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ರಾಷ್ಟ್ರಾಧ್ಯಕ್ಷ ಹುದ್ದೆ ತೊರೆಯುವುದು ಸರಿಯಲ್ಲ ಎಂದು ಪಕ್ಷದ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಸಲಹೆ ನೀಡಿದ್ದಾರೆ. ಅಲ್ಲದೆ ಒಂದು ವೇಳೆ ರಾಜೀನಾಮೆ ನೀಡುವುದೇ ಆದಲ್ಲಿಪರ್ಯಾಯ ವ್ಯವಸ್ಥೆ ಮಾಡುವವರೆಗೂ ರಾಹುಲ್‌ ಹುದ್ದೆಯಲ್ಲಿ ಮುಂದುವರೆಯಬೇಕು ಎಂದು ಒತ್ತಾಯಿಸಿದ್ದಾರೆ.

ಪಂಜಾಬ್‌, ಮಹಾರಾಷ್ಟ್ರ, ರಾಜಸ್ಥಾನ, ತೆಲಂಗಾಣದ ಕಾಂಗ್ರೆಸ್‌ ಘಟಕದಲ್ಲಿನ ಬಂಡಾಯದ ಹಿನ್ನೆಲೆಯಲ್ಲಿ ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ವೀರಪ್ಪ ಮೊಯ್ಲಿ, ‘ನಾಯಕತ್ವ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳದೇ ಇದ್ದಾಗ, ಇಂಥ ಸಂಗತಿಗಳು ನಡೆಯುತ್ತವೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಆದ ಹಿನ್ನಡೆಯಿಂದ ಕಾಂಗ್ರೆಸ್‌ ನಿರಾಶೆಗೊಳ್ಳಬಾರದು.

ಮುಂದಿನ ದಿನಗಳಲ್ಲಿ ಖಂಡಿತಾ ಪಕ್ಷ ಪುಟಿದೇಳಲಿದೆ. ಇಂಥಾ ಒಂದು ಆಶಾವಾದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಂದ ಹಿಡಿದು ಮೇಲಿನ ಹಂತದ ನಾಯಕರಲ್ಲಿ ಇರಬೇಕು. ಪಂಜಾಬ್‌, ರಾಜಸ್ಥಾನದಲ್ಲಿನ ಕಾಂಗ್ರೆಸ್‌ ಘಟಕಗಳಲ್ಲಿ ಬಂಡಾಯದ ಬೆಂಕಿ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮಧ್ಯಪ್ರವೇಶಿಸಬೇಕು. ಭಿನ್ನಮತ ಶಮನಗೊಳಿಸಬೇಕು. ತಕ್ಷಣವೇ ರಾಜೀನಾಮೆ ಹಿಂಪಡೆಯಬೇಕು ಎಂದು ಸಲಹೆ ಮಾಡಿದ್ದಾರೆ.

ರಾಜೀನಾಮೆ ನೀಡಲು ರಾಹುಲ್‌ ಅವರಿಗೆ ಇದು ಸೂಕ್ತ ಸಮಯವಲ್ಲ. ಪರಿಸ್ಥಿತಿಯನ್ನು ನಿಭಾಯಿಸಲು ಪರ್ಯಾಯ ವ್ಯವಸ್ಥೆ ಮಾಡುವವರೆಗೂ ರಾಹುಲ್‌ ಅವರು ಹುದ್ದೆ ತೊರೆಯಬಾರದು. ರಾಹುಲ್‌ ಅವರು ತಕ್ಷಣವೇ ರಾಜೀನಾಮೆ ಹಿಂಪಡೆಯಬೇಕು. ಅಧಿಕಾರ ವಹಿಸಿಕೊಂಡು, ಶಿಸ್ತು ಜಾರಿಗೊಳಿಸಿ, ಸಮಯ ವ್ಯರ್ಥ ಮಾಡದೇ ಪಕ್ಷ ಪುನಶ್ಚೇತನಗೊಳಿಸಬೇಕು. ವಿಶ್ವಾಸ, ಕೆಚ್ಚು ತುಂಬಬೇಕು ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

22 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago