Featured

ಕಾಂಗ್ರೆಸ್‌ ಎಂಥಹಾ ಕುತಂತ್ರ ಮಾಡಿದರೂ ಬಿಜೆಪಿ ಎಂದಿಗೂ ಎದೆಗುಂದುವುದಿಲ್ಲ : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಹುಬ್ಬಳ್ಳಿ : ಇಂದು ನಮ್ಮ ಚುನಾವಣೆ ಅಭಿಯಾನದ ಅತ್ಯುತ್ತಮ ದಿನ. ಕಾಗಿನೆಲೆಯಲ್ಲಿ ಹಿಂದುಳಿದ ವರ್ಗಗಳ ಸಮಾವೇಶ ಮಾಡಿದ್ದೇವೆ.ಕಾಂಗ್ರೆಸ್ ವಿರೋಧದಿಂದ ರಾಜ್ಯಸಭೆಯಲ್ಲಿ ಓಬಿಸಿ ಬಿಲ್ ಪಾಸ್ ಆಗುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅಮಿತ್ ಶಾ, ಇಂದು ಶಿವಯೋಗ ಮಂದಿರದಲ್ಲಿ ಸಾಕಷ್ಟು ಸ್ವಾಮೀಜಿಗಳು ನನ್ನನ್ನು ಭೇಟಿಯಾಗಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಲಿಂಗಾಯತ ಧರ್ಮದ ನಿಲುವಿನ ಬಗ್ಗೆ ಸ್ವಾಮೀಜಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ಮಾದರಿಯ ರೆಕಮಂಡೇಷನ್ ಕೇಂದ್ರ ಕಾಂಗ್ರೆಸ್ ಸರ್ಕಾರ ಹಿಂದೆ ತಿರಸ್ಕರಿಸಿದೆ. ಕಾಂಗ್ರೆಸ್ ನವರು ಚುನಾವಣೆಗಾಗಿ ಲಿಂಗಾಯತ ಸ್ವತಂತ್ರ ಧರ್ಮದ ಕುತಂತ್ರ ಮಾಡುತ್ತಿದ್ದಾರೆ. ಇದರ ಹಿಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಆಗದಂತೆ ತಡೆಯುವ ಷಡ್ಯಂತ್ರವಿದೆ. ಬಿಜೆಪಿ ಇದಕ್ಕೆಲ್ಲ ಜಗ್ಗುವುದಿಲ್ಲ.ನಾಲ್ಕೂವರೆ ವರ್ಷ ಸುಮ್ಮನಿದ್ದ ಸಿದ್ದರಾಮಯ್ಯ ಚುನಾವಣೆಗಾಗಿ ಪ್ರತ್ಯೇಕ ಧರ್ಮದ ವಿಷಯ ಹರಿಬಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧ ಬಂದ್ ಮಾಡುವ ಅವಶ್ಯಕತೆಯಿರಲಿಲ್ಲ. ಬಂದ್ ವೇಳೆ ನಡೆದ ಹಿಂಸಾಚಾರಕ್ಕೆ ಪ್ರತಿಪಕ್ಷದ ಎಲ್ಲರೂ ಹೊಣೆಗಾರರು.
ಮೀಸಲಾತಿ ರದ್ದಾಗುತ್ತಿದೆ ಎನ್ನುವ ಸುಳ್ಳುಸುದ್ದಿ ಹಬ್ಬಿಸಲಾಗುತ್ತಿದೆ. ಬಿಜೆಪಿ ಮೀಸಲಾತಿ ರದ್ದು ಮಾಡಲ್ಲ.ನಾವು ಮೀಸಲಾತಿ ಪರವಾಗಿ ಇದ್ದೇವೆ.ಯಾವುದೇ ಪಕ್ಷ ಮೀಸಲಾತಿ ವಿರೋಧಿಸಿದರು ನಾವು ಖಂಡಿಸುತ್ತೇವೆ. ರಾಜಕೀಯ ಲಾಭಕ್ಕಾಗಿ ಜನರ ದಾರಿ ತಪ್ಪಿಸಲಾಗುತ್ತಿದೆ.ನಾವು ಅಂಬೇಡ್ಕರ್ ರಚಿಸಿರುವ ಸಂವಿಧಾನಕ್ಕೆ ಬದ್ಧರಾಗಿದ್ದೇವೆ. ದಾರಿ ತಪ್ಪಿಸುವವರ ಮಾತುಗಳನ್ನು ಜನ ಕೇಳಬಾರದು ಎಂದಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago