ರಾಜ್ಯ ನ್ಯೂಸ್

ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಇರುವವರನ್ನು ಮಲಗಲು ಬಿಡುವುದಿಲ್ಲ : ಶ್ರೀರಾಮುಲು

 ‘ಬಿ.ಎಸ್‌. ಯಡಿಯೂರಪ್ಪ ಅವರ ರಾಜೀನಾಮೆಯಿಂದ ನಾವೇನೂ ಕಂಗೆಟ್ಟಿಲ್ಲ; ಆದರೆ, ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಇರುವವರನ್ನು ಮಲಗಲು ಬಿಡುವುದಿಲ್ಲ’ ಎಂದು ಶಾಸಕ ಬಿ. ಶ್ರೀರಾಮುಲು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಹುಮತ ಸಾಬೀತುಪಡಿಸಲು ಬಿಜೆಪಿಗೆ ಅವಕಾಶ ಮಾಡಿಕೊಡದೇ ಗೆದ್ದಿದ್ದಾಗಿ ಅವರು ಬೀಗುತ್ತಿದ್ದಾರೆ. ಆ ಎರಡೂ ಪಕ್ಷಗಳು ಹಿಂದಿನ ಚುನಾವಣೆಗಿಂತ ಕಡಿಮೆ ಸ್ಥಾನಗಳನ್ನು ಪಡೆದಿದ್ದು, ಜನ ಅವರನ್ನು ತಿರಸ್ಕರಿಸಿದ್ದಾರೆ ಎಂಬುದನ್ನು ಮರೆಯಬಾರದು’ಎಂದರು.

‘ಭ್ರಷ್ಟಾಚಾರ ನಡೆಸಲು ಕಾಂಗ್ರೆಸ್‌ನವರು ಲೋಕಾಯುಕ್ತ ಸಂಸ್ಥೆಯ ಹಲ್ಲು ಮುರಿದಿದ್ದಾರೆ. ಮೈತ್ರಿ ಸರ್ಕಾರದ ಹೆಸರಿನಲ್ಲಿ ಈಗಲೂ ಭ್ರಷ್ಟಾಚಾರ ಮುಂದುವರಿಸಬಹುದು ಎಂದು ಭಾವಿಸಿದ್ದಾರೆ. ಆದರೆ, 104 ಸದಸ್ಯ ಬಲದ ಬಿಜೆಪಿ ಪ್ರಬಲ ಪ್ರತಿಪಕ್ಷವಾಗಿ ವಿಧಾನಸಭೆಯಲ್ಲಿ ಕೆಲಸ ನಿರ್ವಹಿಸಲಿದೆ. ಅವರ ಪ್ರತಿಯೊಂದು ಅಕ್ರಮವನ್ನೂ ಬಯಲಿಗೆಳೆಯಲಿದೆ. ದಿನದ 24 ತಾಸೂ ಅವರ ಕೆಲಸದ ಮೇಲೆ ನಿಗಾ ಇಡುತ್ತೇವೆ’ ಎಂದರು.

‘ಬಿಜೆಪಿ ಅಧಿಕಾರಕ್ಕೆ ಬಂದರೆ ಜೈಲಿಗೆ ಹೋಗಬೇಕಾಗುತ್ತದೆ ಎಂಬ ಭಯದಿಂದ ಕಾಂಗ್ರೆಸ್‌– ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡಿವೆ. ಈ ಮೈತ್ರಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ’ ಎಂದರು.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago