ಲಕ್ನೋ: ಕೇಂದ್ರದ ಮಾಜಿ ಸಚಿವ, ಈ ಬಾರಿ ಚುನಾವಣೆಯ ತಾರಾ ಪ್ರಚಾರಕರಾಗಿದ್ದ ಆರ್‌ಪಿನ್ ಸಿಂಗ್ ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.
ಸಿಂಗ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ತಮ್ಮ ಭದ್ರಕೋಟೆಯಾದ ಪದ್ರೌನಾದಿಂದ ಯುಪಿ ಚುನಾವಣೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ದೆಹಲಿಯಲ್ಲಿ ಬಿಜೆಪಿ ಸೇರಿದ ಸಿಂಗ್, ಕಳೆದ 32 ವರ್ಷಗಳಿಂದ ಒಂದೇ ಪಕ್ಷದಲ್ಲಿ ಇದ್ದೆ. ಆದರೆ ಈಗ ಆ ಪಕ್ಷ (ಕಾಂಗ್ರೆಸ್) ಮೊದಲಿನಂತಿಲ್ಲ. ಈಗ ಎಲ್ಲರಿಗೂ ತಿಳಿದಿರುವಂತೆ ಬಿಜೆಪಿ ಜನಹಿತಕ್ಕಾಗಿ ದುಡಿಯುತ್ತಿದೆ. ರಾಷ್ಟ್ರವನ್ನು ಕಟ್ಟುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ ಚುನಾವಣೆಗೆ ಕಾಂಗ್ರೆಸ್ ಸೋಮವಾರ ಘೋಷಿಸಿದ್ದ ತಾರಾ ಪ್ರಚಾರಕರ ಪಟ್ಟಿಯಲ್ಲಿ ಆರ್‌ಪಿಎನ್ ಸಿಂಗ್ ಕೂಡ ಸ್ಥಾನ ಪಡೆದುಕೊಂಡಿದ್ದರು. ಆದರೆ ಅವರು ಪಕ್ಷದ ವಿಚಾರವಾಗಿ ಅಸಮಾಧಾನ ಹೊಂದಿದ್ದರು. ಯುಪಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದ ಪ್ರಚಾರದಿಂದ ದೂರ ಉಳಿದಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…