ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ “ವಕ್ರ ದೃಷ್ಟಿಕೋನ’ವುಳ್ಳ ವ್ಯಕ್ತಿ: ಶಾ ವ್ಯಂಗ್ಯ vishwanews24

ಹೊಸದಿಲ್ಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ “ವಕ್ರ ದೃಷ್ಟಿಕೋನ’ವುಳ್ಳ ವ್ಯಕ್ತಿ. ಅವರು ಯಾವುದನ್ನೂ ನೇರವಾಗಿ ನೋಡುವುದಿಲ್ಲ. ಬಡವರು, ವಲಸೆ ಕಾರ್ಮಿಕರ ಖಾತೆಗಳಿಗೆ ನೇರವಾಗಿ ಹಣ ವರ್ಗಾಯಿಸುವ ರಾಹುಲ್‌ ಯೋಜನೆಯನ್ನು ದೇಶದ ಜನರೇ ತಿರಸ್ಕರಿಸಿದ್ದಾರೆ. ಹೀಗೆಂದು ಹೇಳಿರುವುದು ಕೇಂದ್ರ ಗೃಹ ಸಚಿವ ಅಮಿತ್‌ ಶಾ. ಸರ್ಕಾರವು ಕಾರ್ಮಿಕರ ಖಾತೆಗಳಿಗೆ 6 ತಿಂಗಳ ಕಾಲ 7,500 ರೂ.ಗಳನ್ನು ವರ್ಗಾಯಿಸಬೇಕು ಎಂಬ ರಾಹುಲ್‌ ಆಗ್ರಹ ಕುರಿತು ಶಾ ಸುದ್ದಿವಾಹಿನಿ ಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಲೋಕ ಸಭೆ ಚುನಾವಣೆಗೂ ಮುನ್ನವೇ ರಾಹುಲ್‌ ನ್ಯಾಯ್‌ ಹೆಸರಿನ ಈ ಯೋಜನೆಯ ಸುತ್ತಲೇ ಸುತ್ತುತ್ತಿದ್ದಾರೆ. ಜನರು ಅದನ್ನು ತಿರಸ್ಕರಿಸಿರುವುದು ರಾಹುಲ್‌ಗೆ ಗೊತ್ತಿಲ್ಲವೆಂದು ಕಾಣಿಸುತ್ತದೆ. ವರ್ಷ ಕಳೆದರೂ ಅವರು ಮಾತ್ರ ಆ ಯೋಜನೆ ಬಿಟ್ಟು ಆಚೆ ಬರುತ್ತಿಲ್ಲ ಎಂದೂ ಶಾ ವ್ಯಂಗ್ಯವಾಡಿದ್ದಾರೆ.

ಸ್ಪಷ್ಟ ಬಹುಮತ: 2021ರ ಪಶ್ಚಿಮ ಬಂಗಾಲ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನೂ ಶಾ ವ್ಯಕ್ತಪಡಿಸಿದ್ದಾರೆ. ಬಂಗಾಲದ ಜನತೆ ಪರಿವರ್ತನೆ ಬಯಸುತ್ತಿದ್ದಾರೆ. ಮೂರನೇ ಎರಡರಷ್ಟು ಬಹುಮತದಿಂದ ನಾವು ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಎಂದಿದ್ದಾರೆ.

8ರಂದು ರ್ಯಾಲಿ ಜೂ.8ರಂದು ವರ್ಚುವಲ್‌ ರ್ಯಾಲಿ ಮೂಲಕ ಪ.ಬಂಗಾಳದ ಜನತೆಯನ್ನು ಉದ್ದೇಶಿಸಿ ಅಮಿತ್‌ ಶಾ ಭಾಷಣ ಮಾಡಲಿ¨ªಾರೆ ಎಂದು ಬಿಜೆಪಿ ಹೇಳಿದೆ. ಸದ್ಯ ಸಾರ್ವಜನಿಕ ಸಭೆಗಳಿಗೆ ನಿಷೇಧವಿರುವ ಕಾರಣ, ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ಸಂಪರ್ಕಿಸಲಿದ್ದೇವೆ. 5 ದಿನಗಳ ಕಾಲ ಈ ರ್ಯಾಲಿ ನಡೆಯಲಿದೆ ಎಂದಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

20 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

21 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

21 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

21 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

22 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

22 hours ago