Featured

ಕಾಂಗ್ರೆಸ್‌ ಮತ್ತು ಜೆಡಿಎಸ್ ಬಡವರು, ಹಾಗೂ ರೈತರ ಪರವಾಗಿ ಕೆಲಸ ಮಾಡುತ್ತಿದೆ ;ನಾವು ದೇಶವನ್ನು ಒಗ್ಗೂಡಿಸುತ್ತೇವೆ : ರಾಹುಲ್‌ ಗಾಂಧಿ

ಬೆಂಗಳೂರು: ದೇಶಕ್ಕೆ ಏನೂ ಮಾಡದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯನ್ನು ಸೋಲಿಸುವುದೇ ನಮ್ಮ ಮುಖ್ಯ ಗುರಿಯಾಗಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕರೆ ನೀಡಿದ್ದಾರೆ.

ಬೆಂಗಳೂರಿನ ಹೊರವಲಯದ ಮಾದವಾರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಕ್ಷಗಳು ಬೃಹತ್ ಪರಿವರ್ತನಾ ಸಮಾವೇಶದಲ್ಲಿ ರಾಹುಲ್‌ ಗಾಂಧಿ ತಿಳಿಸಿದರು.

ಕಾಂಗ್ರೆಸ್‌ ಮತ್ತು ಜೆಡಿಎಸ್ ಕಾರ್ಯಕರ್ತರು ಈಗ ಒಟ್ಟಗಿ ಕೆಲಸ ಮಾಡಬೇಕು. ಜೆಡಿಎಸ್‌ ಅಭ್ಯರ್ಥಿ ಇದ್ದ ಕಡೆ ಕಾಂಗ್ರೆಸ್‌ ಕಾರ್ಯಕರ್ತರು, ಅದೇ ರೀತಿ ಕಾಂಗ್ರೆಸ್‌ ಅಭ್ಯರ್ಥಿ ಇದ್ದ ಕಡೆ ಜೆಡಿಎಸ್‌ ಕಾರ್ಯಕರ್ತರು ಪ್ರಚಾರ ಮಾಡಿ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಒಡೆಯುವ ಕೆಲಸ ಮಾಡಿದರು. ಆದರೆ ನಾವು ದೇಶವನ್ನು ಒಟ್ಟುಗೂಡಿಸುವ ಕೆಲವ ಮಾಡುತ್ತೇವೆ ಎಂದು ಘೋಷಿಸಿದವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ. ಕೇಂದ್ರ ಸರ್ಕಾರ ದೇಶದ ಜನರಲ್ಲಿ ಒಡಕನ್ನು ಉಂಟು ಮಾಡುವ ಕೆಲಸ ಮಾಡುತ್ತಿದೆ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದವರನ್ನು ಒಟ್ಟುಗೂಡಿಸುವ ಕೆಲಸ ಮಾಡಲಿದೆ ಎಂದರು..

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಮಾತನಾಡಿ, ಈ ಸಮಾವೇಶದ ಮೂಲಕ ದೇಶಕ್ಕೆ ಮೈತ್ರಿ ಕೂಟದ ಬಗ್ಗೆ ಸ್ಪಷ್ಟ ಸಂದೇಶ ರವಾನೆಯಾಗಬೇಕು ಎಂದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ದೇಶದ ರಾಜಕಾರಣದಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್-ಜೆಡಿಎಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ದೇಶದ ರಾಜಕಾರಣದ ಬದಲಾವಣೆಗೆ ಸಾಕ್ಷಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

ಈ ಸಂದರ್ಭ ಮಾತನಾಡಿದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೂಚನೆ ಮೇರೆಗೆ 2 ಪಕ್ಷಗಳ ಜಂಟಿ ಸಮಾವೇಶ ಆಯೋಜಿಸಿದ್ದು, ದೇಶಕ್ಕೆ ಬದಲಾವಣೆಯ ಸಂದೇಶ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಲವಾರು ನಾಯಕರು ಪರಿವರ್ತನಾ ಸಮಾವೇಶದಲ್ಲಿ ಭಾಗಿಯಾಗಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago